Breaking
Tue. Oct 8th, 2024

ಇಂದು ನಡೆದ ಗ್ರಾಮ ಲೆಕ್ಕಾಧಿಕಾರಿ ನೇಮಕಾತಿಯ ಪ್ರಶ್ನೆ ಪತ್ರಿಕೆ ಲೀಕ್ ಆರೋಪ : ದೂರು ಕೊಟ್ಟ ಪರೀಕ್ಷಾರ್ಥಿ!

By Mooka Nayaka News Sep 29, 2024
Spread the love

ಬೀದರ್ : ಇಂದು ರಾಜ್ಯಾದ್ಯಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂದು ಪರೀಕ್ಷಾರ್ಥಿಯೊಬ್ಬ ಪರೀಕ್ಷಾ ಪ್ರಾಧಿಕಾರಕ್ಕೆ ದೂರು ನೀಡಿದ್ದಾನೆ.ಈ ಕುರಿತಂತೆ ಪರೀಕ್ಷೆ ಬರೆದ ಅಭ್ಯರ್ಥಿ ಪ್ರಸ್ತುತ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಇ-ಮೇಲ್ ಮೂಲಕ ದೂರು ಸಲ್ಲಿಸಿದ್ದಾನೆ.

ಇಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಕಡ್ಡಾಯ ಕನ್ನಡ ಪರೀಕ್ಷೆ ನಡೆಸಲಾಗಿದೆ. ಈ ವೇಳೆ ಬೀದರ್‌ ಜಿಲ್ಲಾ ಕೇಂದ್ರದಲ್ಲಿನ ದತ್ತಗಿರಿ ಕಾಲೇಜಿನ ಗ್ರಾಮ ಲೆಕ್ಕಾಧಿಕಾರಿ ಹುದ್ದೆ ನೇಮಕಾತಿ ಕಡ್ಡಾಯ ಕನ್ನಡ ಪರೀಕ್ಷೆ ನಡೆಸಲಾಗುತ್ತಿದ್ದ ಕೇಂದ್ರದಲ್ಲಿ ಈ ಎಡವಟ್ಟು ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಈ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಹಾಜರಾಗಿದ್ದ ಅಭ್ಯರ್ಥಿ ತಮಗೆ ಸೀಲ್ ಓಪನ್ ಮಾಡಿದ ಪ್ರಶ್ನೆ ಪತ್ರಿಕೆ ಬಂದಿದ್ದಕ್ಕೆ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಕಲಬುರಗಿ ಜಿಲ್ಲೆ ಚಿಂಚೋಳಿ ಮೂಲದ ಸಂತೋಷ್ ಎಂಬ ಪರೀಕ್ಷಾರ್ಥಿ, ಬೀದರ್ ನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಗ್ರಾಮ ಲೆಕ್ಕಾಧಿಕಾರಿ ಹುದ್ದೆ ನೇಮಕಾತಿಯ ಕಡ್ಡಾಯ ಕನ್ನಡ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂದು ದೂರು ನೀಡಿದ್ದಾನೆ. ಪರೀಕ್ಷಾ ಕೇಂದ್ರದಲ್ಲಿ ನಮಗೆ ಸೀಲ್ ಓಪನ್ ಮಾಡಿದ ಪ್ರಶ್ನೆ ಪತ್ರಿಕೆ ಹಂಚಿಕೆ ಮಾಡಲಾಗಿದೆ ಎಂದು ಪರೀಕ್ಷಾರ್ಥಿಯಿಂದ ಪರೀಕ್ಷಾ ಪ್ರಾಧಿಕಾರಕ್ಕೆ ದೂರು ಬಂದಿದೆ. ಕಡ್ಡಾಯ ಕನ್ನಡ ಪ್ರಶ್ನೆ ಪತ್ರಿಕೆಯ ಸೀಲ್ ಓಪನ್ ಆಗಿದೆಯೆಂದು ಪರೀಕ್ಷಾರ್ಥಿ ದೂರು ನೀಡಿದ್ದಾನೆ.

 

Related Post