Trending

ರಾಜ್ಯ ಸರ್ಕಾರದಿಂದ ‘BPL ಕಾರ್ಡ್’ದಾರರಿಗೆ ಬಿಗ್ ಶಾಕ್ : ಮಾನದಂಡ ಪರಿಶೀಲನೆಗೆ ಸಮಿತಿ ರಚನೆ 

Spread the love

ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್ ಎನ್ನುವಂತೆ ಇವರಿಗೆ ಬಿಪಿಎಲ್ ಕಾರ್ಡ್ ಕೊಡಬಹುದೋ ಅಥವಾ ಇಲ್ಲವೋ ಎಂಬುದನ್ನು ಮಾನದಂಡ ಪರಿಶೀಲಿಸಲು ಸಮಿತಿಯನ್ನು ರಚಿಸಲಾಗಿದೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ ಅವರು, ಬಿಪಿಎಲ್‌ ಮಾನದಂಡಗಳ ಪರಿಶೀಲನೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೂ ಆಗಿರುವ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಆದಾಯ ತೆರಿಗೆ ಪಾವತಿದಾರರು, ಸರ್ಕಾರಿ ನೌಕರರು ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ ದೂರುಗಳು ಇವೆ. ಬಿಪಿಎಲ್‌ ಪಡಿತರ ಚೀಟಿ ಮಾನದಂಡಗಳ ಜೊತೆಗೆ ಸರ್ಕಾರದ ಪ್ರಾಯೋಜಿತ ಯೋಜನೆಗಳನ್ನೂ ಈ ಸಮಿತಿ ಪರಿಶೀಲಿಸಿ, ಸಲಹೆಗಳನ್ನು ನೀಡಲಿದೆ ಎಂದು ಮಾಹಿತಿ ನೀಡಿದ್ದಾರೆ.

 

[pj-news-ticker]