ನವದೆಹಲಿ: ಕೇಂದ್ರ ಸರ್ಕಾರದ 2024-25 ನೇ ಸಾಲಿನ ಮಧ್ಯಂತರ ಬಜೆಟ್ ಮಂಡನೆ ಮುಕ್ತಾಯಗೊಂಡಿದೆ.
ಬಜೆಟ್ ಮಂಡನೆ ಮಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಹಲವು ಮೂಲಸೌಕರ್ಯ ಯೋಜನೆಗಳ ಘೋಷಣೆಗಳು ಹಾಗೂ ಮಧ್ಯಮ ವರ್ಗಕ್ಕೆ ಒಂದಷ್ಟು ಹೊಸ ಯೋಜನೆಗಳನ್ನು ಪರಿಚಯಿಸಿದ್ದಾರೆ.
ಆರೋಗ್ಯ ಹಾಗೂ ಮೂಲಸೌಕರ್ಯ, ಕೃಷಿ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆಯನ್ನು ಬಜೆಟ್ ನಲ್ಲಿ ನೀಡಲಾಗಿದೆ. ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಆದಾಯ ತೆರಿಗೆ ಮಿತಿಯನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಲಾಗಿದೆ.7 ಲಕ್ಷದವರೆಗಿನ ಆದಾಯ ಹೊಂದಿರುವವರಿಗೆ ತೆರಿಗೆ ವಿನಾಯಿತಿ ಲಭ್ಯತೆ ಮುಂದುವರೆದಿದ್ದು, ಹೊಸ ತೆರಿಗೆ ಪದ್ಧತಿಯನ್ನು ಮುಂದುವರೆಸಲಾಗಿದೆ.
ಕಳೆದ 10 ವರ್ಷಗಳಲ್ಲಿ ಆದಾಯ ತೆರಿಗೆ ಸಂಗ್ರಹ ದುಪ್ಪಟ್ಟಾಗಿದೆ ಎಂದು ನಿರ್ಮಲಾ ಸೀತಾರಾಮನ್ ಬಜೆಟ್ ನಲ್ಲಿ ಮಾಹಿತಿ ನೀಡಿದ್ದಾರೆ.