ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿದ್ದಾಗಲೆ ಹೊಸಕೋಟೆ ತಾಲ್ಲೂಕು ಕಛೇರಿ ಮೇಲಿಂದ ಬಿದ್ದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಬಿಹಾರ ಮೂಲದ ಪ್ರೇಮ್ ಬಾಸ್ಕಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.
ಇಂದು ಬೆಳಿಗ್ಗೆ ತಾಲ್ಲೂಕು ಕಛೇರಿ ಮಹಡಿ ಮೇಲೆ ಹೋಗಿ ಏಕಾಏಕಿ ಕೆಳಗೆ ಬಿದ್ದಿದಾರೆ.ತೀವ್ರ ರಕ್ತ ಸ್ರಾವದಿಂದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಸ್ವಾತಂತ್ರ ದಿನಾಚರಣೆಗೆ ಬಂದ ಅಧಿಕಾರಿಗಳು ಹಾಗೂ ಸಿಬ್ಬಂದಿ ಗಾಬರಿಗೊಂಡಿದ್ದಾರೆ. ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.ಇನ್ನು ಈತನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.