ಶಿವಮೊಗ್ಗ: ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರು ಪಲ್ಟಿಯಾದ ಘಟನೆ ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಕೆರೆಕೋಡಿ ಬಳಿ ರವಿವಾರ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಭತ್ತದ ಗದ್ದೆಗೆ ಕಾರು ಪಲ್ಟಿಯಾಗಿದೆ. ಬೆಂಗಳೂರಿನ ನೆಲಮಂಗಲ ಮೂಲದ ಚಂದನ್ (26) ಮೃತಪಟ್ಟಿದ್ದಾನೆ.
ಬೆಂಗಳೂರಿನಿಂದ ಯುವಕರ ತಂಡ ಸಿಗಂದೂರಿಗೆ ಪ್ರವಾಸಕ್ಕೆ ಬಂದಿದ್ದರು. ಕೊಡಗು ಮೂಲದ ನಂದನ್, ಕೋಲಾರದ ಕೋದಂಡ, ಹಾಸನದ ಭರತ್, ಮಂಡ್ಯ ಜಿಲ್ಲೆಯ ಯೋಗೇಶ್ ಎಂಬುವವರಿಗೆ ಗಂಭೀರ ಗಾಯವಾಗಿದೆ.
ಸ್ಥಳಕ್ಕೆ ಕುಂಸಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.