ಬೆಂಗಳೂರು: ನಗರದ ಹೊರವಲಯದ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ನಗರದಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ನಡೆದಿದೆ.
ತಂದೆ, ತಾಯಿ ಮತ್ತು ಇಬ್ಬರು ಮಕ್ಕಳು ಆತ್ಮಹತ್ಯೆಗೆ ಶರಣಾದವರು. ಕೌಟುಂಬಿಕ ಕಲಹವೇ ಘಟನೆಗೆ ಕಾರಣ ಎಂದು ಶಂಕಿಸಲಾಗಿದೆ. ಕಲಬುರಗಿ ಮೂಲದ ದಂಪತಿ ಕಳೆದ ಕೆಲವು ವರ್ಷಗಳಿಂದ ಸಿಂಗನಾಯಕನಹಳ್ಳಿಯಲ್ಲಿ ವಾಸವಾಗಿದ್ದರು ಎಂದು ಮೂಲಗಳು ತಿಳಿಸಿವೆ.
ಅವಿನಾಶ್ (33), ಮಮತಾ (30), ಅಧಿರಾ (05), ಅನಯಾ (03) ಮೃತ ದುರ್ದೈವಿಗಳು.
ರಾಜಾನುಗುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಪೊಲೀಸ್ ಅಧಿಕಾರಿ ಸಿಕೆ ಬಾಬಾ ತಿಳಿಸಿದ್ದಾರೆ.