Trending

ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು

Spread the love

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರನ್ನು ಶನಿವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸ್ಪತ್ರೆಯ ಮೂಲಗಳು 92 ರ ಹರೆಯದ ಕೃಷ್ಣ ಅವರ ದಾಖಲಾತಿಯನ್ನು ಖಚಿತಪಡಿಸಿದ್ದು, ಆದರೆ ಅವರುಯಾವ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂಬುದನ್ನು ಬಹಿರಂಗಪಡಿಸಿಲ್ಲ. ಆಗಸ್ಟ್‌ನಲ್ಲಿ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.

2009 ರಿಂದ 2012 ರವರೆಗೆ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರದ ಅವಧಿಯಲ್ಲಿ ವಿದೇಶಾಂಗ ಸಚಿವರಾಗಿಯೂ ಕೃಷ್ಣ ಸೇವೆ ಸಲ್ಲಿಸಿದ್ದರು.

[pj-news-ticker]