ಬೆಂಗಳೂರು: ವಿಧಾನ ಪರಿಷತ್ತಿನ ಸ್ಥಾನಕ್ಕೆ ರಾಜೀನಾಮೆ ನೀಡಿರುವಂತ ಸಿ.ಪಿ ಯೋಗೇಶ್ವರ್, ಬಿಜೆಪಿ ಪಕ್ಷದ ವಿರುದ್ಧ ಸಿಡಿದೆದ್ದಿದ್ದಾರೆ. ಇದೀಗ ಚನ್ನಪಟ್ಟಣ ಉಪ ಚುನಾವಣೆಗೆ ಸಮಾಜವಾದಿ ಪಕ್ಷದಿಂದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಸಮಾಜವಾದಿ ಪಕ್ಷದ ನಾಯಕರಿದಂ ಬಿ-ಫಾರಂ ಪಡೆದಂತ ಪೋಟೋಗಳು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿವೆ.
ಬಿಜೆಪಿಯಿಂದ ಚನ್ನಪಟ್ಟಣ ವಿಧಾನ ಸಭಾ ಉಪ ಚುನಾವಣೆಗೆ ಸಿ.ಪಿ ಯೋಗೇಶ್ವರ್ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಆದರೇ ಚನ್ನಪಟ್ಟಣದಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗೆ ಟಿಕೆಟ್ ನೀಡುವುದಕ್ಕೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿತ್ತು. ಈ ವಿಷಯದಿಂದ ಸಿಟ್ಟಾಗಿರುವಂತ ಸಿ.ಪಿ ಯೋಗೇಶ್ವರ್ ಬಿಜೆಪಿಯಿಂದ ವಿಧಾನ ಪರಿಷತ್ ಚುನಾವಣೆಗೆ ನಾಮನಿರ್ದೇಶನಗೊಂಡಿದ್ದಂತ ಸ್ಥಾನಕ್ಕೆ ರಾಜೀನಾಮೆ ನೀಡಿ, ಹೊರ ನಡೆದಿದ್ದರು.
ನಿನ್ನೆ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಂತ ಅವರು, ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂಬುದಾಗಿ ಸುದ್ದಿಗಳು ವೈರಲ್ ಆಗಿತ್ತು. ಆದರೇ ಇಂದು ಸಮಾಜವಾದಿ ಪಕ್ಷದಿಂದ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗುತ್ತಿದೆ.
ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಮಾಜವಾದಿ ನಾಯಕರನ್ನು ಸಿ.ಪಿ ಯೋಗೇಶ್ವರ್ ಭೇಟಿಯಾಗಿ, ಬಿ-ಫಾರಂ ಪಡೆದಿರುವಂತ ಪೋಟೋಗಳು ವೈರಲ್ ಆಗಿದ್ದಾವೆ. ಈ ಮೂಲಕ ಸಮಾಜವಾದಿ ಪಕ್ಷದಿಂದ ನಾಮಿನೇಷನ್ ಮಾಡಲಿದ್ದಾರಾ ಎನ್ನುವ ಕುತೂಹಲವನ್ನು ಹುಟ್ಟು ಹಾಕಿದೆ.