Trending

ಇಂದು ಮೈಸೂರಿಗೆ ಆಗಮಿಸಿದ ಸೋನಿಯಾ ಗಾಂಧಿ, ಪ್ರಿಯಾಂಕಾ ವಾದ್ರಾ : ನಾಳೆ ವಯನಾಡ್ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ

Spread the love

ಮೈಸೂರು : ವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ವಿಶೇಷ ವಿಮಾನದಲ್ಲಿ ಇಂದು ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಸ್ಥಳೀಯ ಕಾಂಗ್ರೆಸ್‌ ಮುಖಂಡರು ಹಾಗೂ ಶಾಸಕರು ಬರಮಾಡಿಕೊಂಡರು.

ರಾಹುಲ್‌ ಗಾಂಧಿ ಅವರಿಂದ ತೆರವಾಗಿರುವ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನಾಳೆ ಕಾಂಗ್ರೆಸ್‌ನ ಹಿರಿಯ ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.ಈ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ವಿಶೇಷ ವಿಮಾನದ ಮೂಲಕ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿದರು. ನಂತರ ರಸ್ತೆಯ ಮೂಲಕ ಗುಂಡ್ಲುಪೇಟೆ ಮಾರ್ಗವಾಗಿ ವಯನಾಡ್‌ಗೆ ತೆರಳಿದರು.ಈ ವೇಳೆ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಸಂಸದ ಸುನಿಲ್ ಬೋಸ್, ಶಾಸಕರಾದ ರವಿಶಂಕರ್, ದರ್ಶನ್ ದ್ರುವನಾರಾಯಣ್, ಎ.ಆರ್.ಕೃಷ್ಣಮೂರ್ತಿ, ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

 

[pj-news-ticker]