Trending

ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಿದ್ದೇನೆ : ಸಿಪಿ ಯೋಗೇಶ್ವರ್ ಹೇಳಿಕೆ

Spread the love

ಬೆಂಗಳೂರು : ಬಿಜೆಪಿ ಹಾಗೂ ಜೆಡಿಎಸ್ ಗೆ ಬಿಗ್ ಶಾಕ್ ನೀಡಿ ಇಂದು ಅಧಿಕೃತವಾಗಿ ಬಿಜೆಪಿಯ ಮಾಜಿ ಎಂಎಲ್ಸಿ ಸಿಪಿ ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ವೇಳೆ ಮಾತನಾಡಿದ ಸಿಪಿ ಯೋಗೇಶ್ವರ್ ಅವರು ನಾನು ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಎಂದು ತಿಳಿಸಿದರು.

ಇಂದು ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಿಪಿ ಯೋಗೇಶ್ವರ್ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಪಿ ಯೋಗೇಶ್ವರ್ ಅವರಿಗೆ ಪಕ್ಷದ ಬಾವುಟ ನೀಡಿ ಸ್ವಾಗತಿಸಿದರು. ಬಳಿಕ ಮಾತನಾಡಿದ ಸಿಪಿ ಯೋಗೇಶ್ವರ್ ಅವರು, ನಾನು ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್ ಪಕ್ಷವನ್ನು ಸೇರಿದ್ದೇನೆ ಎಂದು ತಿಳಿಸಿದರು.

ಕೆಲ ಸಂದರ್ಭದಲ್ಲಿ ನಾವು ಕಟ್ಟಿದ ಮನೆಗಳಲ್ಲಿ ನಾವೇ ಇರಲು ಆಗುವುದಿಲ್ಲ. ಸ್ವಯಂ ಪ್ರೇರಿತವಾಗಿ ನಾನು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದೇನೆ.ಯಾವುದೆ ಷರತ್ತು ಇಲ್ಲದೆ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದೇನೆ ಎಂದು ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಬಳಿಕ ಹೇಳಿಕೆ ನೀಡಿದರು. ಮಾಜಿ ಸಂಸದ ಡಿಕೆ ಸುರೇಶ್ ಸಚಿವರಾದ ಕೃಷ್ಣ ಬೈರೇಗೌಡ ರಾಮಲಿಂಗ ರೆಡ್ಡಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತಿ ಇದ್ದರು.

 

[pj-news-ticker]