Trending

ಶಿಗ್ಗಾವಿ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್ : ಯಾಸಿರ್ ಅಹ್ಮದ್ ಖಾನ್ ಪಠಾಣ್ ಸ್ಪರ್ಧೆ

Spread the love

ಬೆಂಗಳೂರು: ಕರ್ನಾಟಕ ವಿಧಾನಸಭಾ ಉಪ ಚುನಾವಣೆಗೆ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಕಾಂಗ್ರೆಸ್ ಘೋಷಿಸಿತ್ತು. ಇಂದು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ಘೋಷಿಸಿದೆ.

ಕರ್ನಾಟಕದ ಸಂಡೂರು ವಿಧಾನ ಸಭಾ ಉಪ ಚುನಾವಣೆಗೆ ಇ.ಅನ್ನಪೂರ್ಣ ಅವರಿಗೆ ಟಿಕೆಟ್ ನೀಡಲಾಗಿದೆ. ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಗೆ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರಿದಂತೆ ಸಿ.ಪಿ ಯೋಗೇಶ್ವರ್ ಗೆ ಟಿಕೆಟ್ ಘೋಷಿಸಲಾಗಿದೆ.

ಇಂದು ಕಾಂಗ್ರೆಸ್ ಪಕ್ಷದಿಂದ ಶಿಗ್ಗಾವಿ ಉಪ ಚುನಾವಣೆಗೆ ಯಾಸಿರ್ ಅಹ್ಮದ್ ಖಾನ್ ಪಠಾಣ್ ಟಿಕೆಟ್ ನೀಡಲಾಗಿದೆ.

ಅಂದಹಾಗೆ ಸಂಡೂರು, ಶಿಗ್ಗಾಂವ್ ಮತ್ತು ಚನ್ನಪಟ್ಟಣಕ್ಕೆ ನವೆಂಬರ್.13ರಂದು ಮತದಾನ ನಡೆಯಲಿದೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅಕ್ಟೋಬರ್.25, 2024 ಕೊನೆಯ ದಿನವಾಗಿದೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್.30, 2024 ಲಾಸ್ಟ್ ಡೇಟ್. ನವೆಂಬರ್.23ರಂದು ಫಲಿತಾಂಶ ಪ್ರಕಟವಾಗಲಿದೆ.

 

[pj-news-ticker]