ಸಾಗರ: ತಾಲೂಕಿನ ಸಿರವಂತೆಯ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶಕುಂತಲಾ (29),ಚನ್ನಗಿರಿ ತಾಲ್ಲೂಕಿನ ಮಾವಿನಕಟ್ಟೆ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಶುಕ್ರವಾರ ಮೃತಪಟ್ಟಿರುವ ಘಟನೆ ನಡೆದಿದೆ.
ಶಿವಮೊಗ್ಗದಲ್ಲಿ ನಡೆಯುತ್ತಿದ್ದ ತರಬೇತಿಗೆ ಹೊರಟಿದ್ದ ಅವರು, ಚನ್ನಗಿರಿಯ ಮಾವಿನಕಟ್ಟೆಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದರು.
ಈ ವೇಳೆ ಲಾರಿಯೊಂದು ಶಕುಂತಲಾ ಅವರಿಗೆ ಡಿಕ್ಕಿ ಹೊಡೆದಿದೆ. ತಕ್ಷಣ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಶಿಕ್ಷಕಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಶಕುಂತಲಾ ಅವರು ಸಿರವಂತೆ ಶಾಲೆಯಲ್ಲಿ ಇಂಗ್ಲಿಷ್ ಬೋಧಿಸುತ್ತಿದ್ದರು. ಕಳೆದ ವರ್ಷವಷ್ಟೆ ಶಿಕ್ಷಣ ಇಲಾಖೆಗೆ ನೇಮಕಾತಿಗೊಂಡಿದ್ದರು.