ವಿಶಾಖಪಟ್ಟಣಂ: ಭಾರತ ತಂಡದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ತಮ್ಮ ವೃತ್ತಿಜೀವನಕ್ಕೆ ಉತ್ತಮ ಆರಂಭ ನೀಡಿದ್ದಾರೆ. ವಿಶಾಖಪಟ್ಟಣಂನಲ್ಲಿನ ಡಾ. ವೈಎಸ್ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಭರ್ಜರಿ ದ್ವಿಶತಕ ಸಿಡಿಸಿ ಮಿಂಚಿದ್ದಾರೆ.
ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಜೈಸ್ವಾಲ್ 209 ಎಸೆತಗಳಲ್ಲಿ ತಮ್ಮ ಚೊಚ್ಚಲ ಡಬಲ್ ಸೆಂಚುರಿ ಪೂರೈಸಿದ್ದಾರೆ.ಇಂಗ್ಲೆಂಡ್ ವಿರುದ್ಧದ ವಿಶಾಖಪಟ್ಟಣಂ ಟೆಸ್ಟ್ ಪಂದ್ಯದ ಎರಡನೇ ದಿನದಂದು, ಜೈಸ್ವಾಲ್ ಆಟದ ಮೊದಲ ಸೆಷನ್‌ಗೆ ಬರುವ ಮೂಲಕ ಈ ಸಾಧನೆ ಮಾಡಿದರು. ಯಶಸ್ವಿ ಜೈಸ್ವಾಲ್ ಮೊದಲ ದಿನ 179 ರನ್ ಗಳಿಸಿ ಅಜೇಯರಾಗಿ ಮರಳಿದ್ದರು.
ಇನ್ನು, 2ನೇ ಪಂದ್ಯದ 2ನೇ ದಿನದಾಟದ ಮೊದಲ ಸೆಶನ್ ನಲ್ಲಿಯೇ ಜೈಸ್ವಾಲ್ ಅಬ್ಬರಿಸಿದರು. ಅವರು ಭರ್ಜರಿಯಾಗಿ ಬೌಂಡರಿ ಮೂಲಕ ದ್ವಿಶತಕ ಸಿಡಿಸಿ ಮಿಂಚಿದರು. ಜೈಸ್ವಾಲ್ 209 ಎಸೆತಗಳಲ್ಲಿ ತಮ್ಮ ಚೊಚ್ಚಲ ಡಬಲ್ ಸೆಂಚುರಿ ಪೂರೈಸಿದ್ದಾರೆ.
ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಸ್ಫೋಟಕ ಇನ್ನಿಂಗ್ಸ್ ಆಡುವ ಮೂಲಕ ಭಾರತವನ್ನು ಉತ್ತಮ ಸ್ಥಿತಿಗೆ ತಂದರು. ಭಾರತ ತನ್ನ ಮೊದಲ ಇನಿಂಗ್ಸ್‌ನಲ್ಲಿ 112 ಓವರ್‌ಗಳಲ್ಲಿ 396 ರನ್‌ಗಳಿಗೆ ಆಲೌಟ್ ಆಗಿದ್ದು, ಕುಲದೀಪ್ ಅಜೇಯ ಎಂಟು ರನ್ ಗಳಿಸಿದ್ದಾರೆ.