ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರು ಕುಂಸಿ ಪೊಲೀಸ್ ಠಾಣೆಗೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ವಿವಿಧ ಪ್ರಕರಣಗಳಲ್ಲಿ ಸೀಜ್ ಮಾಡಿದಂತ ವಾಹನಗಳ ಸ್ಥಳಕ್ಕೆ ಭೇಟಿ ಮಾಡಿ ಪರಿಶೀಲಿಸಿದಂತ ಗೃಹ ಸಚಿವ ಡಾ.ಜಿ ಪರಮೇಶ್ವರ್, ಆ ಬಳಿಕ ಠಾಣಾಧಿಕಾರಿಗಳ ಬಳಿಯಲ್ಲಿ ಎಷ್ಟು ವಾಹನ ಸೀಜ್ ಮಾಡಿದ್ದೀರಿ.? ಯಾವ ಯಾವ ಕೇಸಲ್ಲಿ ವಾಹನಗಳನ್ನು ಹಿಡಿದಿಟ್ಟುಕೊಂಡಿದ್ದೀರಿ ಎಂಬುದಾಗಿ ಲೆಕ್ಕ ಕೇಳಿದರು. ಆಗ ಸರಿಯಾಗಿ ಉತ್ತರಿಸದಂತ ಠಾಣಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡು, ಸೂಕ್ತವಾದ ರಿಜಿಸ್ಟಾರ್ ಇಟ್ಟು, ಎಲ್ಲಾ ಮಾಹಿತಿಯನ್ನು ದಾಖಲಿಸುವಂತೆ ಸೂಚಿಸಿದರು.
ಶಾಸಕರಾದ ಗೋಪಾಲಕೃಷ್ಣ ಬೇಳೂರು, ಮಂಜುನಾಥ್ ಭಂಡಾರಿ, ಬಲ್ಕಿಶ್ ಭಾನು, ಪೂರ್ವ ವಲಯ ಐಜಿಪಿ ರಮೇಶ್ ಬಾನೋತ್, SP ಮಿಥುನ್ ಕುಮಾರ್, ಪೊಲೀಸ್ ಇನ್ಸ್ಪೆಕ್ಟರ್ ದೀಪಕ್ ಇದ್ದರು.