Trending

ಜಮೀರ್ ಸಂಧಾನ ಯಶಸ್ವಿ : ಅಜ್ಜಂಪೀರ್ ಖಾದ್ರಿ ನಾಮಪತ್ರ ವಾಪಸ್

Spread the love

ಹಾವೇರಿ: ತೀವ್ರ ಕುತೂಹಲ ಕೆರಳಿಸಿದ್ದ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸೈಯದ್ ಅಜ್ಜಂಪೀರ್ ಖಾದ್ರಿ ಅವರು ಪಕ್ಷೇತರರಾಗಿ ಸಲ್ಲಿಸಿದ್ದ ನಾಮಪತ್ರ ವಾಪಸು ಪಡೆದಿದ್ದಾರೆ.

ಬೆಂಗಳೂರಿನಿಂದ ಮಂಗಳವಾರ ರಾತ್ರಿ ಹುಬ್ಬಳ್ಳಿಗೆ ಬಂದಿದ್ದ ಖಾದ್ರಿ, ಸಚಿವರಾದ ಜಮೀರ್ ಅಹ್ಮದ್ ಹಾಗೂ ಶಿವಾನಂದ ಪಾಟೀಲ ಜೊತೆಯಲ್ಲಿ ಬುಧವಾರ ಬೆಳಿಗ್ಗೆ ಚುನಾವಣಾಧಿಕಾರಿ ಕಚೇರಿಗೆ ಬಂದರು.

ಸಚಿವರು, ಶಾಸಕರು ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿಯೇ ಖಾದ್ರಿ ಅವರು ನಾಮಪತ್ರ ವಾಪಸು ಪಡೆದಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅಜ್ಜಂಪೀರ್ ಖಾದ್ರಿ ಅವರು ಪಕ್ಷದ ಮುಂದೆ ನಾನು ಯಾವುದೇ ಬೇಡಿಕೆಯನ್ನು ಇಟ್ಟಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರದ ಯೋಜನೆಗಳು ಜನಪರವಾಗಿವೆ. ಸಿದ್ದರಾಮಯ್ಯ ಅವರ ಶಿಷ್ಯ ನಾನು. ಅವರ ಮಾರ್ಗದರ್ಶನದಲ್ಲಿ ಮುಂದುವರಿಯುವೆ ಎಂದು ಹೇಳಿದರು.

 

[pj-news-ticker]