ನವದೆಹಲಿ: ಕೆನರಾ ಬ್ಯಾಂಕ್‌ಗೆ ಸಂಬಂಧಿಸಿದ 538 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.
ಮುಂಬೈನಲ್ಲಿರುವ ಇಡಿ ಕಚೇರಿಯಲ್ಲಿ ಸುದೀರ್ಘ ವಿಚಾರಣೆಯ ಬಳಿಕ ಗೋಯಲ್ ಅವರನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಬಂಧಿಸಲಾಯಿತು.
ಗೋಯಲ್ ಅವರ ವಿರುದ್ಧ ವಂಚನೆ, ಕ್ರಿಮಿನಲ್ ಪ್ರೀತೂರಿ ಪ್ರಕರಣ ದಾಖಲಿಸಲಾಗಿತ್ತು. ಈ ಹಿಂದೆ ಸಿಬಿಐ ಅಧಿಕಾರಿಗಳು ನರೇಶ್ ಗೊಯಲ್ ಅವರ ನಿವಾಸ, ಕಚೇರಿ ಸೇರಿ ಮುಂಬೈನ 7 ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದರು. ಈ ನಡುವೆ ಗೋಯಲ್ ಎರಡು ಬಾರಿ ಸಮನ್ಸ್ ಸ್ವೀಕರಿಸಿರಲಿಲ್ಲ. ಕೆನರಾ ಬ್ಯಾಂಕ್ ನಿಂದ 848 ಕೋಟಿ ರೂ. ಸಾಲ ಪಡೆದಿದ್ದ ಜೆಟ್ ವೇಸ್ ನ ನರೇಶ್ ಗೋಯಲ್ 538 ಕೋಟಿ ರೂ. ಸಾಲ ಮರುಪಾವತಿಸಿರಲಿಲ್ಲ. ಈ ಹಣವನ್ನು ಬೇರೆಡೆಗೆ ವರ್ಗಾಯಿಸಿದ್ದರು ಎನ್ನಲಾಗಿದೆ. ಈ ಸಂಬಂಧ ಕೆನರಾ ಬ್ಯಾಂಕ್ ಸಿಬಿಐಗೆ ದೂರು ನೀಡಿತ್ತು.