Trending

ಮುಡಾ ಹಗರಣ: ನ.6ರಂದು ವಿಚಾರಣೆಗೆ ಹಾಜರಾಗುವಂತೆ ‘ಸಿದ್ಧರಾಮಯ್ಯ’ಗೆ ಲೋಕಾಯುಕ್ತ ನೋಟಿಸ್

Spread the love

ಮೈಸೂರು: 40 ವರ್ಷದ ರಾಜಕಾರಣದಲ್ಲಿ ಸಿಎಂ ಸಿದ್ಧರಾಮಯ್ಯಗೆ ವಿಚಾರಣೆಗೆ ಹಾಜರಾಗುವಂತೆ ಮೊದಲ ಬಾರಿಗೆ ಲೋಕಾಯುಕ್ತದಿಂದ ನೋಟಿಸ್ ನೀಡಲಾಗಿದೆ. ನವೆಂಬರ್.6ರಂದು ಮುಡಾ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಎ.1 ಆರೋಪಿಯಾಗಿದ್ದಾರೆ. ಅವರಿಗೆ ನವೆಂಬರ್.6ರಂದು ಮುಡಾ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

ನವೆಂಬರ್.6ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ಧರಾಮಯ್ಯಗೆ ನೋಟಿಸ್ ನಲ್ಲಿ ತಿಳಿಸಲಾಗಿದೆ.

ಈಗಾಗಲೇ ಮುಡಾ ಹಗರಣದಲ್ಲಿ ಎ.2 ಆರೋಪಿಯಾಗಿರುವಂತ ಸಿಎಂ ಸಿದ್ಧರಾಮಯ್ಯ ಪತ್ನಿ ಪಾರ್ವತಿ, ಎ3 ಆರೋಪಿ ಮಲ್ಲಿಕಾರ್ಜುನ, ಎ.4 ಆರೋಪಿಯನ್ನು ವಿಚಾರಣೆಗೆ ಲೋಕಾಯುಕ್ತ ಅಧಿಕಾರಿಗಳು ಒಳಪಡಿಸಿದ್ದರು. ಇದೀಗ ಸಿಎಂ ಸಿದ್ಧರಾಮಯ್ಯಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

 

[pj-news-ticker]