Breaking
Mon. Jun 17th, 2024

ದೇಶ ವಿಭಜನೆ ಮಾಡಿ ಎಂದು ನಾನು ಎಲ್ಲಿಯೂ ಹೇಳಿಲ್ಲ; ಕನ್ನಡಿಗರ ಸ್ವಾಭಿಮಾನಕ್ಕಾಗಿ ಜೈಲಿಗೆ ಹೋಗಲು ಸಿದ್ಧ – ಡಿಕೆ ಸುರೇಶ್‌

By Mooka Nayaka News Feb 4, 2024
Spread the love

ಬೆಂಗಳೂರು: ದೇಶ ವಿಭಜನೆ ಮಾಡಿ ಎಂದು ನಾನು ಎಲ್ಲಿಯೂ ಹೇಳಿಲ್ಲ. ಒಂದು ವೇಳೆ ಬಿಜೆಪಿಯವರು ಪೊಲೀಸ್‌ ಠಾಣೆಗೆ ದೂರು ನೀಡಿದರೆ, ಕನ್ನಡಿಗರ ಸ್ವಾಭಿಮಾನ ಎತ್ತಿ ಹಿಡಿಯಲು ಜೈಲಿಗೆ ಹೋಗಲು ಸಿದ್ಧ ಎಂದು ಸಂಸದ ಡಿಕೆ ಸುರೇಶ್‌ ಸವಾಲ್‌ ಹಾಕಿದ್ದಾರೆ.

ಆನೇಕಲ್‌ನಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ತಾರತಮ್ಯ ಧೋರಣೆ ವಿರುದ್ಧ ದನಿ ಎತ್ತಿದ್ದೇನೆ. ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳು ಕೇಂದ್ರದ ತಾರತಮ್ಯ ನೀತಿಯ ವಿರುದ್ಧ ಧ್ವನಿ ಎತ್ತಿವೆ. ಕೇಂದ್ರದ ಈ ಧೋರಣೆ ದೇಶದ ಏಕತೆ ಮತ್ತು ಒಕ್ಕೂಟ ವ್ಯವಸ್ಥೆ ಮಾರಕ ಎಂದು ವಾಗ್ದಾಳಿ ನಡೆಸಿದರು.

ಕನ್ನಡಿಗರ ಧ್ವನಿಯಾಗಿ ಮಾತನಾಡಿದ್ದೇನೆ; ದೇಶ ವಿಭಜನೆ ಎಂದು ತಿರುಚಲಾಗಿದೆ

ಮಲತಾಯಿ ಧೋರಣೆ ಕೈ ಬಿಡುವಂತೆ ಕೇಂದ್ರ ಸರ್ಕಾರಕ್ಕೆ ಹೇಳಿದ್ದೇನೆಯೇ ಹೊರತು, ದೇಶ ವಿಭಜನೆಯ ಬಗ್ಗೆ ಮಾತನಾಡಿಲ್ಲ ಎಂದು ತಮ್ಮ ಹೇಳಿಕೆ ಸಮರ್ಥಿಸಿಕೊಂಡರು.

ಕೇಂದ್ರ ಸರ್ಕಾರ ನೀಡುತ್ತಿರುವ ಅನುದಾನದಲ್ಲಿ ಕರ್ನಾಟಕಕ್ಕೆ ಮತ್ತು ಕನ್ನಡಿಗರಿಗೆ ಅನ್ಯಾಯ ಆಗುತ್ತಿದೆ. ಈ ಬಗ್ಗೆ ಕನ್ನಡಿಗರ ಧ್ವನಿಯಾಗಿ ಮಾತನಾಡಿದ್ದೇನೆ, ಆದರೆ ನನ್ನ ಹೇಳಿಕೆಯನ್ನು ದೇಶ ವಿಭಜನೆ ಎಂದು ತಿರುಚಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದೇಶದಲ್ಲಿ ತ್ರಿಭಾಷಾ ನೀತಿ ಜಾರಿಯಲ್ಲಿದೆ. ದಕ್ಷಿಣ ಭಾರತದವರು ತೃತೀಯ ಭಾಷೆಯಾಗಿ ಹಿಂದಿ ಕಲಿಯುತ್ತಿದ್ದಾರೆ. ಆದರೆ ಉತ್ತರ ಭಾರತದವರು ತೃತೀಯ ಭಾಷೆಯಾಗಿ ದಕ್ಷಿಣ ಭಾರತದ ಯಾವ ಭಾಷೆಯನ್ನೂ ಕಲಿಯುತ್ತಿಲ್ಲ. ದಕ್ಷಿಣ ಭಾರತದ ಮೇಲೆ ಹಿಂದಿ ಹೇರಲಾಗುತ್ತಿದೆ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

ಕರ್ನಾಟಕದಿಂದ ಪ್ರತಿ ವರ್ಷ 4 ಲಕ್ಷ ಕೋಟಿ ತೆರಿಗೆ ಹಣ ಸಂಗ್ರಹವಾಗುತ್ತಿದೆ. ಆದರೆ ಕರ್ನಾಟಕಕ್ಕೆ ಕೇವಲ 50 ಸಾವಿರ ಕೋಟಿ ಅನುದಾನ ನೀಡಲಾಗುತ್ತಿದೆ. ತೆರಿಗೆ ಸಂಗ್ರಹದ ಕರ್ನಾಟಕ ಪಾಲು ನೀಡುವಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ. ರಾಜ್ಯದ ಆದಾಯದ ಶೆ.17ರಷ್ಟು ದೊರೆಯುತ್ತಿದೆ. ತೆರಿಗೆ ಆದಾಯದ ಶೆ 337 ರಷ್ಟು ಉತ್ತರ ಪ್ರದೇಶಕ್ಕೆ ಮತ್ತ ಶೇ 430 ರಷ್ಟು ಬಿಹಾರ ರಾಜ್ಯಕ್ಕೆ ಅನುದಾನ ನೀಡಲಾಗುತ್ತಿದೆ. ಈ ಅನ್ಯಾಯವನ್ನು ಸರಿಪಡಿಸಿ ಕಾನೂನು ಬದ್ಧವಾಗಿ ರಾಜ್ಯಕ್ಕೆ ದೊರೆಯಬೇಕಾದ ಪಾಲನ್ನು ನೀಡಬೇಕು ಎಂದು ಒತ್ತಾಯ ಮಾಡಿದ್ದೇನೆ ಎಂದು ಹೇಳಿದರು.

Related Post