ಶಿಕಾರಿಪುರ: ದಾಂಪತ್ಯ ಕಲಹದಿಂದ ಪತಿಯು ಪತ್ನಿಯನ್ನು ಹತ್ಯೆಗೈದ ಘಟನೆ ಇಂದು ನಡೆದಿದೆ. ಹತ್ಯೆಗೀಡಾದ ಮಹಿಳೆ ತಾಲ್ಲೂಕಿನ ಅಂಬ್ಲಿಗೊಳ್ಳ ಗ್ರಾಮದ ನಿವಾಸಿ ಗೌರಮ್ಮ(29)ಎಂದು ತಿಳಿದು ಬಂದಿದೆ.
ಗೌರಮ್ಮ ಗ್ರಾಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದು, ಗಂಡ ಮನೋಜ್(30) ಜತೆ ಜಗಳವಾಗಿದ್ದು,ಈ ವೇಳೆ ಮನೋಜ್ ಪತ್ನಿಯ ಕುತ್ತಿಗೆಗೆ ಟವೆಲ್ ಬಿಗಿದು ಹತ್ಯೆ ಮಾಡಿದ್ದಾನೆ ಎಂದು ಗೌರಮ್ಮ ತಂದೆ ಗುತ್ಯಪ್ಪ ಗ್ರಾಮಾಂತರ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಆರೋಪಿ ಮನೋಜ್ ನನ್ನು ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ. ಕೊಲೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.