ಶಿವಮೊಗ್ಗ: ಕಡವೆ ಬೇಟೆಯಾಡಿದ ಆರೋಪದ ಮೇಲೆ ಓರ್ವ ಆರೋಪಿಯನ್ನು ಬಂಧಿಸಿದ್ದು ಉಳಿದ ನಾಲ್ವರು ಪರಾರಿಯಾಗಿರುವ ಘಟನೆ ಜಿಲ್ಲೆಯ ದಾನವಾಡಿ ಕಿರು ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಮಂಜುನಾಥ್ ಎನ್ನಲಾಗಿದ್ದು ಬಂಧಿತನಿಂದ ಕಡವೆ ಮಾಂಸ ಬೇಟೆಗೆ ಬಳಸಿದ ಆಯುಧಗಳನ್ನು ವಶಕ್ಕೆ ಪಡೆಯಲಾಗಿದೆ.
ಭದ್ರಾವತಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಶಿಶ್ ರೆಡ್ಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ನಾಲ್ವರು ಪರಾರಿಯಾಗಿದ್ದು ಅವರ ಪತ್ತೆಗೆ ಬಲೆ ಬೀಸಿದ್ದಾರೆ.
ಆರೋಪಿಗಳು ದಾನವಾಡಿ ಕಿರು ಅರಣ್ಯ ಪ್ರದೇಶದಲ್ಲಿ ಕಡವೆಯನ್ನು ಬೇಟೆಯಾಡಿದ್ದರು ಎನ್ನಲಾಗಿದೆ.