Trending

ಸಚಿವ ಜಮೀರ್ ‘ಕರಿಯ’ ಹೇಳಿಕೆ ಸರಿಯಲ್ಲ, ಅದನ್ನು ನಾನು ಖಂಡಿಸುತ್ತೇನೆ : ಡಿಸಿಎಂ ಡಿ.ಕೆ. ಶಿವಕುಮಾರ್

Spread the love

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕುರಿತು ಸಚಿವ ಜಮೀರ್ ಅಹ್ಮದ್ ಅವರ ಕರಿಯಾ ಹೇಳಿಕೆ ಸರಿಯಲ್ಲ. ಕಪ್ಪು ಬಿಳುಪು ಅಂತ ಕರೆಯೋದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಡಿಸಿಎಂ, ನಾನು ಆ ಹೇಳಿಕೆಯನ್ನು ಒಪ್ಪುವುದಿಲ್ಲ. ಅದನ್ನು ನಾನು ಖಂಡಿಸ್ತೇನೆ. ಜಮೀರ್ ಅವರು ಏನು ಬೇಕಾದ್ರೂ ಕರೆದುಕೊಳ್ಳಲಿ. ಕರಿಯ ಅಂತಾದ್ರೂ ಅನ್ನಲಿ, ಕೊಚ್ಚೆ ಅಂತಾದ್ರೂ ಕರೆಯಲಿ. ನಾನು ಪಕ್ಷದ ಅಧ್ಯಕ್ಷನಾಗಿ ಹೇಳ್ತೇನೆ. ನಾನು ಆನ್ ರೆಕಾರ್ಡ್ ಹೇಳ್ತೇನೆ ಆ ಹೇಳಿಕೆ ಸರಿಯಲ್ಲ. ಜಮೀರ್ ವಿರುದ್ಧ ಕ್ರಮದ ಬಗ್ಗೆ ಆಮೇಲೆ ನೋಡೋಣ ಎಂದರು.

ನಮ್ಮ ಮುಖ್ಯಮಂತ್ರಿಗಳು ಕಾಂಗ್ರೆಸ್ ಶಾಸಕರಿಗೆ 50 ಕೋಟಿ ಆಮಿಷದ ಬಗ್ಗೆ ಹೇಳಿದರು. ಇದೇ ಯತ್ನಾಳ್ ಅವರು ಸರ್ಕಾರ ಬೀಳಿಸಲು 1 ಸಾವಿರ ಕೋಟಿ ಮೀಸಲಿಟ್ಟಿದ್ದಾರೆ ಎಂದು ಆರೋಪ ಮಾಡಿದ್ದರು. ಇದಕ್ಕಿಂತ ದೊಡ್ಡ ಸಾಕ್ಷಿ ಬೇಕೇ? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಈ ಹಿಂದೆ ಖರೀದಿ ಮಾಡಿದ್ದ ಶಾಸಕರು ಕುರಿಗಳಲ್ಲವೇ?. ಬಿಜೆಪಿಯವರು ಕುರಿಗಳನ್ನೇ ಖರೀದಿ ಮಾಡಿದ್ದು. ದನ ಕುರಿಗಳನ್ನು ಖರೀದಿ ಮಾಡಿದಂತೆ ಶಾಸಕರನ್ನು ಖರೀದಿ ಮಾಡಿದ್ದಿರಲ್ಲವೇ ಎಂದು ಈ ಹಿಂದೆಯೂ ಪ್ರಶ್ನಿಸಿದ್ದೆವು. ಸಿ.ಪಿ.ಯೋಗೇಶ್ವರ್ ಅವರು ಅಶ್ವತ್ ನಾರಾಯಣ್ ಜೊತೆಗೂಡಿ ಶ್ರೀನಿವಾಸ್ ಗೌಡರ ಮನೆಗೆ ಹೋಗಿ ಹಣವಿಟ್ಟು ಬಂದೇ ಎಂದು ಸದನದಲ್ಲಿಯೇ ಹೇಳಿಲ್ಲವೇ ಎಂದು ಪ್ರಶ್ನಿಸಿದ್ದರು.

ಈ ಹಿಂದೆ ಆಡಳಿತದಲ್ಲಿ ಇದ್ದಾಗ ಬಿಜೆಪಿಯವರು ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ನೀಡಿದ್ದರು ಎಂದು ಈ ಹಿಂದೆ ಯತ್ನಾಳ್ ಆರೋಪ ಮಾಡಿದ್ದರು. ವಿರೋಧ ಪಕ್ಷದ ಸದಸ್ಯರಾಗಿದ್ದಾಗಲೂ ಇದೇ ಆರೋಪ ಮಾಡುತ್ತಿದ್ದಾರೆ. ಕೇಂದ್ರದಲ್ಲಿ ಮಾಜಿ ಸಚಿವರಾಗಿದ್ದವರು, ಈ ರೀತಿಯ ಹೇಳಿಕೆಯನ್ನು ನೀಡಲು ಯತ್ನಾಳ್ ಅವರು ದಡ್ಡರೇ? ಎಂದು ಪ್ರಶ್ನಿಸಿದರು.

ರಾಜ್ಯದ ಕೊರೊನಾ ಹಗರಣಗಳ ಬಗ್ಗೆ ಸಂಸತ್ತಿನಲ್ಲಿ ದನಿ ಎತ್ತಲಾಗುವುದು ಎನ್ನುವ ಚರ್ಚೆಯ ಬಗ್ಗೆ ಪ್ರತಿಕ್ರಿಯಿಸಿ, ಮೈಕಲ್ ಕುನ್ಹಾ ಅವರು ಕೊರೊನಾ ಹಗರಣಗಳ ಬಗ್ಗೆ ಮಾಡಿರುವ ತನಿಖೆಯ ವರದಿ ನಮಗೆ ಬಂದಿದೆ. ಇದರ ಬಗ್ಗೆ ಒಂದು ಸಭೆ ನಡೆಸಲಾಗಿದೆ. ಇದರ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ. ಕುನ್ಹಾ ಅವರು ಹಗರಣದ ಹಣವನ್ನು ವಸೂಲಿ ಮಾಡಿ ಎಂದು ಹೇಳಿದ್ದಾರೆ. ಈ ರೀತಿ ಮಾಡಲು ಒಂದಷ್ಟು ನೀತಿ ನಿಯಮಗಳಿರುವ ಕಾರಣ ಇದರ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

[pj-news-ticker]