ಬೆಂಗಳೂರು: ಲೋಕಾಯುಕ್ತ ದಾಳಿಯಲ್ಲಿ ಪುತ್ರನ ಮನೆಯಲ್ಲಿ ಸಿಕ್ಕ ಕೋಟಿ ಕೋಟಿ ಅಕ್ರಮ ಹಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಅಲ್ಲಿಸಿದ್ದಾರೆ.
ಕಳೆದ ಐದು ದಿನಗಳಿಂದ ನಾಪತ್ತೆಯಾಗಿರುವ ವಿರೂಪಾಕ್ಷಪ್ಪ ಅಜ್ಞಾತ ಸ್ಥಳದಿಂದಲೇ ತಮ್ಮ ವಕೀಲರಿಂದ ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ತುರ್ತು ವಿಚಾರಣೆ ನಡೆಸುವಂತೆ ಕೋರ್ಟ್ಗೆ ಮನವಿ ಮಾಡಿದ್ದಾರೆ.
ಇಂದೇ (ಮಾರ್ಚ್ 06) ವಿಚಾರಣೆಗೆ ಮಾಡಾಳ್ ವಿರೂಪಾಕ್ಷಪ್ಪ ಪರ ವಕೀಲ ಸಂದೀಪ್ ಪಾಟೀಲ್ ಕೋರ್ಟ್ಗೆ ಮನವಿ ಮಾಡಿದರು. ಆದ್ರೆ, ಹೈಕೋರ್ಟ್ ನ್ಯಾಯಮೂರ್ತಿ ಕೆ.ನಟರಾಜನ್ ಅವರು ನಾಳೆಗೆ(ಮಾರ್ಚ್ 07) ವಿಚಾರಣೆ ನಿಗದಿಪಡಿಸಿದ್ದಾರೆ.