Trending

‘ದಾವಣಗೆರೆ ವಿವಿ ಸಿಂಡಿಕೇಟ್ ಪ್ರಾಧಿಕಾರ’ದ ನಾಮನಿರ್ದೇಶಿತ ಸದಸ್ಯರಾಗಿ ‘ಡಾ.ಜಿ.ಕೆ ಪ್ರೇಮ’ ನೇಮಕ

Spread the love

ಬೆಂಗಳೂರು: ದಾವಣಗೆರೆ ವಿಶ್ವ ವಿದ್ಯಾಲಯದ ಸಿಂಡಿಕೇಟ್ ಪ್ರಾಧಿಕಾರಕ್ಕೆ ನಾಮ ನಿರ್ದೇಶಿತ ಸದಸ್ಯರನ್ನಾಗಿ ಡಾ.ಜಿ.ಕೆ ಪ್ರೇಮ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಇಂದು ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ವಿಶ್ವ ವಿದ್ಯಾಲಯಗಳ ಅಧಿನಿಯಮ 2000ರ ಪ್ರಕರಣ 28(1)(ಜಿ)ರಡಿ ಪ್ರದತ್ತವಾದಂತ ಅಧಿಕಾರವನ್ನು ಚಲಾಯಿಸಿ ಹಾಗೂ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮ 2000ರ ಪ್ರಕರಣ 39(1)ರ ಉಪಬಂಧಕ್ಕೊಳಪಟ್ಟು ದಾವಣಗೆರೆ ವಿಶ್ವವಿದ್ಯಾಲಯದ ಸಿಂಡಿಕೇಟ್ ಪ್ರಾಧಿಕಾರಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಇವರನ್ನು ಸರ್ಕಾರವು ನಾಮನಿರ್ದೇಶನ ಮಾಡಿ ಆದೇಶಿಸಿದೆ.

 

[pj-news-ticker]