ಹಾವೇರಿ : ಶಿಗ್ಗಾವಿಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾಣ್ ಖಾನ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇನ್ನೇನು ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆ ಒಂದೇ ಬಾಕಿ ಇದೆ.
ಮೊದಲು ಹಲವು ಸುತ್ತುಗಳಲ್ಲಿ ಭರತ್ ಬೊಮ್ಮಾಯಿ, ಯಾಸೀನ್ ಪಠಾಣ್ ಖಾನ್ ವಿರುದ್ಧ ಭರ್ಜರಿ ಮುನ್ನಡೆ ಸಾಧಿಸಿದ್ದರು. ಆದರೆ ಬರ ಬರುತ್ತ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಖಾನ್ ಭರತ್ ಬೊಮ್ಮಾಯಿ ಅವರನ್ನು ಹಿಂದಿಕ್ಕಿ ಮುನ್ನಡೆ ಸಾಧಿಸಿದರು. ಇದೀಗ ಮತ ಕೇಂದ್ರ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ.
ಇದೀಗ ಬಲ್ಲ ಮೂಲಗಳ ಮಾಹಿತಿಯ ಪ್ರಕಾರ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾಣ್ ಖಾನ್ ಅವರು 88,985 ಮತಗಳನ್ನು ಪಡೆದುಕೊಂಡಿದ್ದರೆ, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಅವರು 74,860 ಮತಗಳನ್ನು ಪಡೆದುಕೊಂಡಿದ್ದಾರೆ. ಹಾಗಾಗಿ ಇವರ ಮಧ್ಯೆ 14,428 ಮತಗಳ ಅಂತರವಿದೆ ಎಂದು ತಿಳಿದುಬಂದಿದೆ.
