Spread the love

ಕಲಬುರಗಿ: ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪವಾಗಿರುವ ಘಟನೆ ಜಿಲ್ಲೆಯ ಜೇವರ್ಗಿ ಪಟ್ಟಣ ಹೊರವಲಯದಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್​​ನಲ್ಲಿ ನಡೆದಿದೆ.

ಜೇವರ್ಗಿಯಲ್ಲಿ ನಡೆಯುತ್ತಿರವ ವಿಜಯ ಸಂಕಲ್ಪ ರಥಯಾತ್ರೆ ಸಂಬಂಧ ಯಡಿಯೂರಪ್ಪ ಜೇವರ್ಗಿ ಆಗಮಿಸಿದ್ದಾರೆ. ಹೆಲಿಕಾಪ್ಟರ್​ ಮೂಲಕ ಬಂದ ಬಿಎಸ್​ ಯಡಿಯೂರಪ್ಪ ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಹೆಲಿಪ್ಯಾಡ್​​ನಲ್ಲಿ ಕಾಪ್ಟರ್​ ಲ್ಯಾಂಡ್​​ ಆಗುವ ವೇಳೆ  ಪ್ಲಾಸ್ಟಿಕ್ ಚೀಲಗಳು ಹಾರಿಬಂದಿವೆ. ತಕ್ಷಣ ಎಚ್ಚೆತ್ತ ಪೈಲೆಟ್‌ ಹೆಲಿಕಾಪ್ಟರ್​ನ್ನು ಲ್ಯಾಂಡ್​ ಮಾಡದೆ ಬೇರೆಡೆ ತೆಗೆದುಕೊಂಡು ಹೋಗಿದ್ದಾರೆ. ಇದರಿಂದ ಕ್ಷಣಕಾಲ ಆತಂಕ ಸೃಷ್ಟಿಯಾಗಿತ್ತು.

Leave a Reply

Your email address will not be published. Required fields are marked *