Trending

ಬುದ್ಧಿವಾದ ಹೇಳಿದ್ದಕ್ಕೆ ಮಗನಿಂದ ಹಲ್ಲೆ, ಚಿಕಿತ್ಸೆ ಫಲಿಸದೇ ಪ್ರಾಣಬಿಟ್ಟ ತಂದೆ

Spread the love

ಹುಬ್ಬಳ್ಳಿ: ಮಗನಿಂದ ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ತಂದೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ನಡೆದಿದೆ. ನಾಗರಾಜ್ ಮೈಸೂರು (77) ಮಗನಿಂದ ಹತ್ಯೆಯಾದ ತಂದೆ. ಅಣ್ಣಪ್ಪ ಮೈಸೂರು ಕೊಲೆ ಮಾಡಿದ ಮಗ ಎಂದು ತಿಳಿದು ಬಂದಿದೆ.

ನ.19 ರಂದು ತಂದೆ ಮತ್ತು ಮಗನ ನಡುವೆ ಜಗಳ ವಿಕೋಪಕ್ಕೆ ತಿರುಗಿದೆ. ಮದ್ಯದ ಅಮಲಿನಲ್ಲಿ ಅಣ್ಣಪ್ಪ ತಂದೆ ನಾಗರಾಜ್ ಮೇಲೆ ಹಲ್ಲೆ ಮಾಡಿದ್ದಾನೆ. ಪರಿಣಾಮ ನಾಗರಾಜ್ ಗಂಭೀರವಾಗಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ನಾಗರಾಜ್ ಮೃತಪಟ್ಟಿದ್ದಾರೆ. ಆರೋಪಿ ಮಗ ತನ್ನ ಪತ್ನಿಯನ್ನು ಕರೆದುಕೊಂಡು ಪರಾರಿಯಾಗಿದ್ದಾನೆ. ಈ ಕುರಿತು ಮೃತನ ಪತ್ನಿ ರೇಣುಕಾ, ಮಗನ ವಿರುದ್ಧ ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮೃತನ ಪತ್ನಿ ರೇಣುಕಾ ಪ್ರತಿಕ್ರಿಯಿಸಿ, “ಪುತ್ರ ಅಣ್ಣಪ್ಪ ಚಿಂದಿ ಆಯುವ ಕೆಲಸ ಮಾಡುತ್ತಿದ್ದ. ಬಂದ ಹಣದಿಂದ ಮದ್ಯ ಸೇವಿಸಿ ಬಂದು ನಿತ್ಯ ಮನೆಯಲ್ಲಿ ಜಗಳ ಮಾಡುತ್ತಿದ್ದ. ನನ್ನ ಪತಿ ಬುದ್ಧಿ ಮಾತು ಹೇಳಿದ್ದಕ್ಕೆ ಕೋಪಗೊಂಡು ಕೈಯಲ್ಲಿ ಗುದ್ದಿ ಹಲ್ಲೆ ಮಾಡಿದ್ದಾನೆ. ಮಗನ ಕೃತ್ಯಕ್ಕೆ ಸೊಸೆಯೂ ಸಹಕಾರ ನೀಡಿದ್ದಾಳೆ. ಈಗ ಇಬ್ಬರೂ ತಲೆಮರೆಸಿಕೊಂಡಿದ್ದಾರೆ. ಮಗ ಮತ್ತು ಸೊಸೆ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

 

[pj-news-ticker]