ನವದೆಹಲಿ : ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಇಂದು ವಯನಾಡ್ ನೂತನ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟರ್ ನಲ್ಲಿ ಸಿಎಂ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದು, ವಯನಾಡ್ ಲೋಕಸಭಾ ಕ್ಷೇತ್ರದಿಂದ ಜಯಗಳಿಸಿ, ಸಂಸತ್ತು ಪ್ರವೇಶಿಸಿರುವ ಪ್ರಿಯಾಂಕ ಗಾಂಧಿ ವಾದ್ರಾ ಅವರನ್ನು ಇಂದು ದೆಹಲಿಯಲ್ಲಿ ಭೇಟಿಯಾಗಿ, ಭರ್ಜರಿ ಗೆಲುವಿಗೆ ಅಭಿನಂದಿಸಿದೆ. ಸಂಸತ್ತಿನ ಒಳಗೆ ಮತ್ತು ಹೊರಗೆ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರ ಜನಪರವಾದ ಧ್ವನಿಗೆ ಈ ಗೆಲುವಿನಿಂದ ಬಲ ಬಂದಿದೆ ಎಂದು ತಿಳಿಸಿದ್ದಾರೆ.