ಬೆಂಗಳೂರು: ಸ್ಯಾಂಡಲ್ ವುಡ್ ಸಿನಿಮಾರಂಗದ ಹಿರಿಯ ನಟ ಬ್ಯಾಂಕ್ ಜನಾರ್ದನ್ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆ ದಾಖಲಿಸಲಾಗಿದ್ದು, ಅಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ. ಕಳೆದ 40 ವರ್ಷಗಳಿಂದ ಬಣ್ಣದ ಲೋಕದಲ್ಲಿ ನೂರಾರು ಪಾತ್ರಗಳನ್ನು ಮಾಡಿರುವ 74 ವರ್ಷದ ಜನಾರ್ದನ್ ಅವರು ಹೆಚ್ಚಾಗಿ ಪೋಷಕ ಹಾಗೂ ಹಾಸ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಂದನವನ ಮಾತ್ರವಲ್ಲದೆ ಅವರು ಕಿರುತೆರೆಯಲ್ಲೂ ನಟಿಸಿ ಸೈ ಎನ್ನಿಸಿಕೊಂಡಿದ್ದಾರೆ. 500ಕ್ಕೂ ಹೆಚ್ಚಿನ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.