Spread the love

ತೀರ್ಥಹಳ್ಳಿ : ತುಂಗಾ ನದಿಯ ನೀರಿನಲ್ಲಿ ಮೀನು ಹಿಡಿಯಲು ಹೋಗಿದ್ದ ಯುವಕನೋರ್ವ ಆಯತಪ್ಪಿ ನೀರಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.

ಪಟ್ಟಣದ ಸಮೀಪದ ಬದನೆಹಿತ್ಲು ಗ್ರಾಮದ ಕಮಲಾಕ್ಷ ಎಂಬ ಯುವಕನೋರ್ವ ಮಂಗಳವಾರ ಮಧ್ಯಾಹ್ನ ತುಂಗಾ ನದಿಗೆ ಮೀನು ಹಿಡಿಯಲು ಹೋಗಿದ್ದಾನೆ. ಈ ವೇಳೆ ಆಯತಪ್ಪಿ ನೀರಿಗೆ ಬಿದ್ದಿದ್ದು ಈಜಲು ಬರದೇ ಇದ್ದ ಕಾರಣ ಸಾವನ್ನಪ್ಪಿದ್ದಾನೆ.

ಸ್ಥಳೀಯರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಹುಡುಕಾಟ ನಡೆಸಿ ಶವವನ್ನು ಹೊರ ತೆಗೆದಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

Leave a Reply

Your email address will not be published. Required fields are marked *