ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಹೊರಗುತ್ತಿಗೆ ನೌಕರರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಮೂರು ತಿಂಗಳಿಂದ ಸಂಬಳ ನೀಡದಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.
ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಕುವೆಂಪು ವಿವಿ ವಿರುದ್ಧ ಧಿಕ್ಕಾರ ಕೂಗಿ ನೌಕರರು ಆಕ್ರೋಶ ವ್ಯಕ್ತಪಡಿಸಿದರು. ಕಳೆದ ನವೆಂಬರ್ ನಿಂದ ಸಂಬಳ ನೀಡದೆ ವಿವಿ ಆಡಳಿತ ಮಂಡಳಿ ನಿರ್ಲಕ್ಷ್ಯ ಮಾಡುತ್ತಿದೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಹಲವು ಬಾರಿ ಮನವಿ ಸಲ್ಲಿಸಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದ ನೌಕರರು ಸಂಬಳ ನೀಡುವ ತನಕ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.