Trending

ಶಿವಮೊಗ್ಗ : ಜ್ಯೋತಿರಾವ್ ಬೀದಿಯಲ್ಲಿ ಕುಡಿಯುವ ನೀರಿನ ಸಮಸ್ಯೆ – ಶಾಸಕ ಚನ್ನಬಸಪ್ಪ ಭೇಟಿ

Spread the love

ಶಿವಮೊಗ್ಗ : ಕಳೆದ ಮೂರು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆಯಿಂದ ತೊಂದರೆ ಅನುಭವಿಸುತ್ತಿದ್ದ ವಿದ್ಯಾನಗರ ಜ್ಯೋತಿರಾವ್ ಬೀದಿಯ ನಿವಾಸಿಗಳಿಂದ ಸಮಸ್ಯೆಯನ್ನು ಬಗೆಹರಿಸುವಂತೆ ಶಾಸಕ ಎಸ್ಎನ್ ಚನ್ನಬಸಪ್ಪ ಅವರಿಗೆ ಮನವಿಯನ್ನು ಸಲ್ಲಿಸಲಾಗಿತ್ತು.

ಮನವಿಗೆ ಸ್ಪಂದಿಸಿ ಇಂದು ಶಾಸಕ ಎಸ್ಎನ್ ಚನ್ನಬಸಪ್ಪ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ಜನರಿಗೆ ಆಗುತ್ತಿರುವ ತೊಂದರೆಯನ್ನು ಪರಿಶೀಲಿಸಿದರು. ನಂತರ ಸಂಬಂಧಪಟ್ಟ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ, ಸೂಕ್ತ ರೀತಿಯಲ್ಲಿ ಹಾಗೂ ಶೀಘ್ರದಲ್ಲಿ ಸಮಸ್ಯೆಗೆ ಪರಿಹಾರವನ್ನು ನೀಡುವಂತೆ ಆದೇಶಿಸಿದರು.

24×7 ನೀರಿನ ಯೋಜನೆಯ ಕಾಮಗಾರಿ ಸಂಪೂರ್ಣ ಗೊಳ್ಳುವವರೆಗೆ ಈ ಹಿಂದೆ ನೀರು ಸರಬರಾಜು ಮಾಡುತ್ತಿದ್ದ ರೀತಿಯಲ್ಲಿಯೇ ನೀರನ್ನು ಬಿಡುವಂತೆ ಅಧಿಕಾರಿಗಳಿಗೆ ಹೇಳಿದ್ದಲ್ಲದೆ,ಈ ಯೋಜನೆಯ ಕಾಮಗಾರಿಯು ಶೀಘ್ರದಲ್ಲಿ ಪೂರ್ಣಗೊಳಿಸಿ ನೀರಿನ ಸಮಸ್ಯೆ ಆಗದಿರುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಈ ಸಂದರ್ಭದಲ್ಲಿ ಮುಖಂಡರುಗಳಾದ ಲಕ್ಷ್ಮಣ್ ಹಾಗೂ ನಿವಾಸಿಗಳಾದ ವಿಜಯಲಕ್ಷ್ಮಿ,ನಸ್ರೀನ್, ಗೀತಾ, ಪರ್ವೀನ್, ಕಲೀಲ್, ಭರತ್, ರಂಜೀತ್, ಈಶ್ವರಪ್ಪ,ರವಿಯಪ್ಪ, ಅರವಿಂದ್, ರೆಹಮಾನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

 

[pj-news-ticker]