Breaking
Mon. Jun 17th, 2024

ಚಿಕ್ಕಮಗಳೂರು ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ: ಮುಖಂಡರ ನಡುವೆ ಹೊಡೆದಾಟ

By Mooka Nayaka News Feb 9, 2024
Spread the love

ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಸಂಬಂಧ ಕರ್ನಾಟಕ ಬಿಜೆಪಿಯಲ್ಲಿರುವ ಅಸಮಾಧಾನಗಳನ್ನು ಬಿವೈ ವಿಜಯೇಂದ್ರ ಹಾಗೂ ಯಡಿಯೂರಪ್ಪ ಒಂದೊಂದಾಗಿಯೇ ಬಗೆಹರಿಸುತ್ತಿದ್ದಾರೆ.

ಇದರ ಮಧ್ಯೆ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಘಟಕದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಮೂಡಿಗೆರೆ ತಾಲೂಕು ಅಧ್ಯಕ್ಷ ನೇಮಕ ವಿಚಾರದಲ್ಲಿ ಬಿಜೆಪಿ ಮುಖಂಡರು ಹೊಡೆದಾಡಿಕೊಂಡಿದ್ದಾರೆ.ಬೀದಿಯಲ್ಲಿ ಹೊಡೆದಾಟದ ವಿಡಿಯೋ ವೈರಲ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.

ಮೂಡಿಗೆರೆ ನೂತನ ಅಧ್ಯಕ್ಷರನ್ನಾಗಿ ಗಜೇಂದ್ರ ಅವರನ್ನು ನೇಮಕ ಮಾಡಿ ಚಿಕ್ಕಮಗಳೂರು ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಆದೇಶ ಹೊರಡಿಸಿದ್ದು, ಇದರ ಬೆನ್ನಲ್ಲೇ ಇನ್ನುಳಿದ ಆಕಾಂಕ್ಷಿಗಳ ಆಕ್ರೋಶದ ಕಟ್ಟೆ ಹೊಡೆದಿದೆ. ಕೆ.ಸಿ.ರತನ್ ಹಸ್ತ ಕ್ಷೇಪದಿಂದ ಅಧ್ಯಕ್ಷ ಸ್ಥಾನ ಕೈತಪ್ಪಿದೆ ಎಂದು ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಪುಟ್ಟಣ್ಣ ಹಾಗೂ ಮತ್ತೋರ್ವ ಆಕಾಂಕ್ಷಿ ಭರತ್ ಗಲಾಟೆ ಮಾಡಿದ್ದಾರೆ. ಈ ವೇಳೆ .ರತನ್ ಅವರಿಗೆ ಗಾಯವಾಗಿದೆ.

ಮೂಡಿಗೆರೆ ಬಿಜೆಪಿ ತಾಲೂಕು ಅಧ್ಯಕ್ಷ ಸ್ಥಾನಕ್ಕೆ 12 ಮಂದಿ ಆಕಾಂಕ್ಷಿಗಳಿದ್ದರು. ಈ ಪೈಕಿ ಇಂದು ಗಜೇಂದ್ರ ಅವರನ್ನ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಇದರ ಬೆನ್ನಲ್ಲೇ ರೊಚ್ಚಿಗೆದ್ದ ಇನ್ನೊಂದು ಗುಂಪು ಗಲಾಟೆ ಮಾಡಿದೆ. ಮೂಡಿಗೆರೆ ಪಟ್ಟಣದ ಬಿಜೆಪಿ ಕಚೇರಿಯ ಮುಂಭಾಗ ಹೊಡೆದಾಟ ನಡೆದಿದ್ದು, ಇದರಲ್ಲಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಸಿ. ರತನ್ ಅವರಿಗೆ ಗಾಯವಾಗಿದ್ದು,ಕೂಡಲೇ ಅವರನ್ನು ಮೂಡಿಗೆರೆಯ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.

Related Post