Spread the love

ಸಾಗರ: ತಾಲೂಕಿನ ಪ್ರಸಿದ್ಧವಾದ ಧಾರ್ಮಿಕ ಕ್ಷೇತ್ರ ಶ್ರೀಕ್ಷೇತ್ರ ಸಿಗಂದೂರಿನ ಚೌಡೇಶ್ವರಿ ದೇವಿಯ ಪೂಜೆಗೆ ಸಂಬಂಧಪಟ್ಟಂತೆ ಸಾಗರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು ದೇವಸ್ಥಾನದ ಪ್ರಧಾನ ಅರ್ಚಕ ಎಸ್.ಪಿ.ಶೇಷಗಿರಿ ಭಟ್ ಅವರಿಗೆ ಪೂಜೆ ಮಾಡಲು ಅಡ್ಡಿಪಡಿಸಬಾರದು ಎಂದು ತಿಳಿಸಿದೆ.

ಈ ಹಿಂದೆ ಸಿಗಂದೂರು ಚೌಡೇಶ್ವರಿ ದೇವಿಯ ಪೂಜೆಗೆ ಸಂಬಂಧಪಟ್ಟಂತೆ ಧರ್ಮದರ್ಶಿ ಡಾ. ರಾಮಪ್ಪ ಸಿಗಂದೂರು ಮತ್ತು ಪ್ರಧಾನ ಅರ್ಚಕ ಎಸ್.ಪಿ.ಶೇಷಗಿರಿ ಭಟ್ ನಡುವೆ ವಿವಾದ ಉಂಟಾಗಿತ್ತು. ಪೂಜೆ ಯಾರು ಮಾಡಬೇಕು ಎನ್ನುವುದಕ್ಕೆ ಸಂಬಂಧಪಟ್ಟಂತೆ ದೇವಸ್ಥಾನದ ಆವರಣದಲ್ಲಿ ಪರಸ್ಪರ ಜಗಳ ನಡೆದು ಪೊಲೀಸರು ಮಧ್ಯಪ್ರವೇಶ ಮಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಈ ಹಿನ್ನೆಲೆಯಲ್ಲಿ ದೇವಿಯ ಪೂಜೆ ಮಾಡಲು ತಮಗೆ ಅವಕಾಶ ಕಲ್ಪಿಸುವಂತೆ ಪ್ರಧಾನ ಅರ್ಚಕ ಶೇಷಗಿರಿ ಭಟ್ ಸಾಗರ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ನ್ಯಾಯಾಲಯವು ಪ್ರಧಾನ ಅರ್ಚಕರಿಗೆ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಧರ್ಮದರ್ಶಿ ಡಾ. ರಾಮಪ್ಪ ಸಿಗಂದೂರು ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ವಾದ ಪ್ರತಿವಾದವನ್ನು ಆಲಿಸಿ ಹಿಂದಿನ ಆದೇಶದಂತೆ ಪ್ರಧಾನ ಅರ್ಚಕ ಎಸ್.ಪಿ.ಶೇಷಗಿರಿ ಭಟ್ ಅವರಿಗೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡುವಂತೆ ಆದೇಶ ಮಾಡಿದೆ.

Leave a Reply

Your email address will not be published. Required fields are marked *