Trending

ಭದ್ರಾವತಿ ಉಕ್ಕು ಕಾರ್ಖಾನೆಗೆ ಪುನಶ್ಚೇತನ : ಹೆಚ್​ಡಿ ಕುಮಾರಸ್ವಾಮಿ ಗುಡ್ ನ್ಯೂಸ್

Spread the love

ಹಾಸನ : ಹಾಸನ ಜಿಲ್ಲೆಯ ಮಾವಿನಕೆರೆ ಶ್ರೀ ರಂಗನಾಥಸ್ವಾಮಿ ದೇವಾಲಯ ಹಾಗೂ ಹುಟ್ಟೂರು ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯ ದೇವೇಶ್ವರ ದೇವಾಲಯಕ್ಕೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಸೋಮವಾರ ಭೇಟಿ ನೀಡಿದ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಇದೇ ವೇಳೆ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ ಪುನಶ್ಚೇತನ ವಿಚಾರವಾಗಿಯೂ ಮಾತನಾಡಿದರು.

ಭದ್ರಾವತಿ ಸೇರಿದಂತೆ ದೇಶದ ವಿವಿಧೆಡೆ ಇರುವ ಉಕ್ಕು ಕಾರ್ಖಾನೆಗಳ ಪುನಶ್ಚೇತನಕ್ಕಾಗಿ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವಂತೆ ಸೂಚಿಸಲಾಗಿದೆ. 1.30 ಲಕ್ಷ ಕೋಟಿ ರೂಪಾಯಿ ವೆಚ್ಚದಲ್ಲಿ ಪುನಶ್ಚೇತನಕ್ಕೆ ಯೋಜನೆ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಮೈಸೂರು ಮಹಾ ಸಂಸ್ಥಾನದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಅವರ ದೂರದೃಷ್ಟಿಯ ಫಲವಾಗಿ ಭದ್ರಾವತಿ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಸ್ಥಾಪನೆ ಆಗಿತ್ತು. ಸಾವಿರಾರು ಜನರಿಗೆ ಅಲ್ಲಿ ಉದ್ಯೋಗ ಅವಕಾಶ ಸಿಕ್ಕಿತ್ತು. ಲಕ್ಷಾಂತರ ಜನರು ಪರೋಕ್ಷವಾಗಿ ಬದುಕು ಕಟ್ಟಿಕೊಂಡಿದ್ದರು. ಅಂತಹ ವೈಭವದ ದಿನಗಳು ಮರುಕಳಿಸುವ ದಿನಗಳು ದೂರವಿಲ್ಲ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಬೃಹತ್ ಕೈಗಾರಿಕೆ ಮತ್ತು ಉಕ್ಕಿನಂತಹ ಎರಡು ಮಹತ್ವದ ಖಾತೆಗಳನ್ನು ನೀಡಿದ್ದಾರೆ. ಎರಡೂ ಜವಾಬ್ದಾರಿಗಳನ್ನು ನಾನು ರಾಜ್ಯಕ್ಕೆ ಅನುಕೂಲವಾಗುವ ರೀತಿಯಲ್ಲಿ ನಿರ್ವಹಣೆ ಮಾಡಲು ಪ್ರಯತ್ನ ಮಾಡುತ್ತಿದ್ದೇನೆ ಎಂದು ಕುಮಾರಸ್ವಾಮಿಯವರು ಹೇಳಿದರು.

 

 

[pj-news-ticker]