Trending

ನಂದಿನಿ ಉತ್ಪನ್ನಗಳಿಗೆ ಹೊಸ ಸೇರ್ಪಡೆ : ವೇ ಪ್ರೋಟೀನ್ ಆಧಾರಿತ ದೋಸೆ, ಇಡ್ಲಿ ಹಿಟ್ಟು ಮಾರುಕಟ್ಟೆಗೆ ಲಗ್ಗೆ

Spread the love

ಬೆಂಗಳೂರು: ದಿನದಿಂದ ದಿನಕ್ಕೆ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ತನ್ನ ನಂದಿನಿ ಬ್ರ್ಯಾಂಡ್‌ನ ಉತ್ಪನ್ನಗಳ ಪಟ್ಟಿಗೆ ಒಂದಿಲ್ಲೊಂದು ಹೊಸ ಉತ್ಪನ್ನಗಳ ಸೇರ್ಪಡೆ ಮಾಡುತ್ತಿದೆ. ನಂದಿನಿಯ ಬಹುತೇಕ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಲಭ್ಯವಾಗುತ್ತಿದೆ. ಇದೀಗ ಪ್ರೋಟೀನ್‌ಯುಕ್ತ ದೋಸೆ ಹಿಟ್ಟು ಮತ್ತು ಇಡ್ಲಿ ಹಿಟ್ಟನ್ನು ಕೂಡ ಮಾರುಕಟ್ಟೆಗೆ ಪರಿಚಯಿಸಿದೆ.

ವಿಧಾನಸೌಧದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂದಿನಿ ಬ್ರ್ಯಾಂಡ್‌ನ ರೆಡಿ ಟು ಕುಕ್ ನಂದಿನಿ ವೇ ಪ್ರೋಟೀನ್ ಆಧಾರಿಕ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದಾರೆ.

ಕೆಎಂಎಫ್ ಬಿಡುಗಡೆ ಮಾಡಿರುವ ಈ ದೋಸೆ ಹಾಗೂ ಇಡ್ಲಿ ಹಿಟ್ಟಿನಲ್ಲಿ ಶೇ 5ರಷ್ಟು ಪ್ರೋಟೀನ್ ಅಂಶವನ್ನು ಸೇರಿಸಲಾಗಿದೆ. ಸದ್ಯ ಬೆಂಗಳೂರು ನಗರದಲ್ಲಿ ಪ್ರಾಯೋಗಿಕವಾಗಿ ಮಾರಾಟ ಮಾಡಲು ನಿರ್ಧರಿಸಲಾಗಿದೆ. ಮುಂದಿನ ದಿನಗಳಲ್ಲಿ ಬೇಡಿಕೆಗೆ ಅನುಗುಣವಾಗಿ ಇತರ ಜಿಲ್ಲೆಗಳಿಗೂ ವಿಸ್ತರಿಸಲು ಚಿಂತನೆ ನಡೆಸಲಾಗಿದೆ.

ದೋಸೆ ಹಾಗೂ ಇಡ್ಲಿ ಹಿಟ್ಟಿನ 450 ಗ್ರಾಂ ತೂಕದ ಪೊಟ್ಟಣಕ್ಕೆ 40 ರೂಪಾಯಿ ಮತ್ತು 900 ಗ್ರಾಂ ತೂಕದ ಪೊಟ್ಟಣಕ್ಕೆ 80 ರೂಪಾಯಿಯನ್ನು ಮಾರಾಟ ದರವನ್ನು ನಿಗದಿ ಮಾಡಲಾಗಿದೆ.

 

[pj-news-ticker]