Spread the love

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋಗಿ ಯುವಕ ಸಾವನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ನಲ್ಲೂರು ಕೆರೆಯಲ್ಲಿ ನಡೆದಿದೆ.

ಚಿಕ್ಕಮಗಳೂರು ನಗರದ ಕೋಟೆ ನಿವಾಸಿ 20 ವರ್ಷದ ಹರ್ಷ ಮೃತ ದುರ್ದೈವಿ. ಹರ್ಷ ತನ್ನ ಸ್ನೇಹಿತರ ಜೊತೆ ನಲ್ಲೂರು ಕೆರೆಯಲ್ಲಿ ಈಜಲು ತೆರಳಿದ್ದಾರೆ, ಈ ವೇಳೆ ಈಜು ಬಾರದೆ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾನೆ, ನಂತರ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಮೃತದೇಹವನ್ನ ಕೆರೆಯಿಂದ ಹೊರ ತೆಗೆದಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *