Trending

ಮರೆಯಾದ ಆರ್ಥಿಕ ತಜ್ಞ : ನಿಗಮಬೋಧ್ ಘಾಟ್‌ನಲ್ಲಿ ನೆರವೇರಿದ ಡಾ. ಮನಮೋಹನ್ ಸಿಂಗ್ ಅಂತ್ಯಕ್ರಿಯೆ

Spread the love

ನವದೆಹಲಿ: ಗುರುವಾರ ಅನಾರೋಗ್ಯದಿಂದ ಇಹಲೋಕ ತ್ಯಜಸಿರುವ ಭಾರತದ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತ್ಯಕ್ರಿಯೆ ದೆಹಲಿಯ ನಿಗಮಬೋಧ್ ಘಾಟ್‌ನಲ್ಲಿ ಸಿಖ್ ಸಂಪ್ರದಾಯದಂತೆ, ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಅಂತ್ಯಕ್ರಿಯೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸ್ಪೀಕರ್ ಓಂ ಬಿರ್ಲಾ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ರಿಂದ ಹಿಡಿದು ಪ್ರಮುಖ ಗಣ್ಯರು, ಕೈ ನಾಯಕರು, ವಿದೇಶಿ ರಾಜತಾಂತ್ರಿಕರು ಪಾಲ್ಗೊಂಡರು. ಮೂರು ಸೇನಾಪಡೆಯಿಂದ ಗೌರವ ಸಮರ್ಪಣೆ ಮಾಡಲಾಯಿತು.

 

[pj-news-ticker]