ಭದ್ರಾವತಿ : ಇಲ್ಲಿನ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವನ ಕೊಲೆಯಾಗಿದೆ. ವೈಯಕ್ತಿಕ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವುದಾಗಿ ಅಂದಾಜಿಸಲಾಗಿದೆ.
ಸೈಯದ್ ರಜಿಖ್ (30) ಮೃತ ದುರ್ದೈವಿ ಯುವಕನಾಗಿದ್ದಾನೆ. ಹರಿತವಾದ ಆಯುಧಗಳಿಂದ ಹತ್ಯೆ ಮಾಡಲಾಗಿದೆ. ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಜಿಖ್ ನನ್ನ ಆತನ ಸಂಬಂಧಿಕರೆ ಕೊಲೆ ಮಾಡಿರುವುದಾಗಿ ಮೃತನ ಕುಟುಂಬ ಆರೋಪಿಸಿದೆ. ಹಣದ ವಿಚಾರದಲ್ಲಿ ಈ ಕೊಲೆ ನಡೆದಿರುವುದಾಗಿ ತಿಳಿದು ಬಂದಿದೆ.