ಭದ್ರಾವತಿ : ಹಿರಿಯ ಪತ್ರಕರ್ತ ಎನ್.ಶ್ರೀರಾಮ್ (79) ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಪ್ರಜಾವಾಣಿ, ಡೆಕ್ಕನ್ ಹೆರಾಲ್ಡ್ ಪತ್ರಿಕೆಗಳ ಏಜೆಂಟ್ ಆಗಿ ಹಾಗೂ ವಿವಿಧ ಪತ್ರಿಕೆಗಳಿಗೆ ಸುದ್ದಿಯನ್ನು ಕಳಿಸುವ ಮೂಲಕ ಐದು ದಶಕಗಳ ಕಾಲ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ಇವರು ಭದ್ರಾವತಿಯ ಪತ್ರಿಕಾ ಕ್ಷೇತ್ರದಲ್ಲಿ ಹೆಸರು ಮಾಡಿದವರು.
ಇವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಕೆ.ವಿ. ಶಿವಕುಮಾರ್ ಹಾಗೂ ಪದಾಧಿಕಾರಿಗಳು, ಸದಸ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.