Trending

ಪ್ರಯಾಗ್​ರಾಜ್​ನ ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ : ಸಿಲಿಂಡರ್​​ಗಳು ಸ್ಫೋಟ, ಹೊತ್ತಿ ಉರಿದ ಟೆಂಟ್​​ಗಳು

Spread the love

ಉತ್ತರ ಪ್ರದೇಶ: ಪ್ರಯಾಗ್​ರಾಜ್​ನ ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಕುಂಭಮೇಳ ಪ್ರದೇಶದ ಸೆಕ್ಟರ್ 19ರಲ್ಲಿ ಎರಡು-ಮೂರು ಸಿಲಿಂಡರ್​​ಗಳು ಸ್ಫೋಟಗೊಂಡಿವೆ. ಸ್ಫೋಟದ ತೀವ್ರತೆಗೆ ಟೆಂಟ್​​ಗಳು ಹೊತ್ತಿ ಉರಿದಿದ್ದು, ಕುಂಭಮೇಳ ಪ್ರದೇಶದ ಸೆಕ್ಟರ್ 20ಕ್ಕೂ ಬೆಂಕಿ ವ್ಯಾಪಿಸಿದೆ. ಸದ್ಯ ಯಾವುದೇ ಸಾವು ನೋವು ಸಂಭವಿಸಿಲ್ಲ.

ವಿವೇಕಾನಂದ ಸೇವಾ ಸಮಿತಿಗೆ ಸೇರಿದ 25ಕ್ಕೂ ಹೆಚ್ಚು ಟೆಂಟ್​ಗಳಿಗೆ ಬೆಂಕಿ ಹತ್ತಿಕೊಂಡಿದೆ. ಟೆಂಟ್​ಗಳಲ್ಲಿ ಇಟ್ಟಿದ್ದ ಸಿಲಿಂಡರ್​ಗಳು ಒಂದೊಂದಾಗಿ ಸ್ಫೋಟಗೊಳ್ಳುತ್ತಿರುವುದರಿಂದ ಬೆಂಕಿ ತೀವ್ರತೆ ಹೆಚ್ಚಾಗುತ್ತಿದೆ. ಬೆಂಕಿ ಅವಘಡದಿಂದಾಗಿ ಮಹಾ ಕುಂಭಮೇಳ ಪ್ರದೇಶದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ.  ಟೆಂಟ್​​ನಲ್ಲಿ ಇರುವವರನ್ನು ಅಧಿಕಾರಿಗಳು ದೂರ ಕಳುಹಿಸಿದ್ದಾರೆ.

ಸದ್ಯ ಸ್ಥಳಕ್ಕಾಗಮಿಸಿದ 50ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಸಿಎಂ ಯೋಗಿ ಆದಿತ್ಯನಾಥ್ ಭೇಟಿ ನೀಡಿದ್ದು,​ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಮಹಾಕುಂಭಮೇಳಕ್ಕೆ ಆಗಮಿಸುವ ಭಕ್ತರು ಉಳಿದುಕೊಳ್ಳಲು ಟೆಂಟ್‌ಗಳ ವ್ಯವಸ್ಥೆ ಮಾಡಲಾಗಿದೆ. ಇದಕ್ಕೆ ಭಕ್ತರು ಹಣ ಪಾವತಿಸಬೇಕು. ಟೆಂಟ್‌ನಲ್ಲಿ ಇರುವುದರೊಂದಿಗೆ ಆಹಾರ ಮಾಡಿಕೊಳ್ಳುವುದಕ್ಕೂ ಸಂಪೂರ್ಣ ವ್ಯವಸ್ಥೆ ಕಲ್ಪಿಸಲಾಗಿದೆ. ಹೀಗಿರುವಾಗ ಟೆಂಟ್​ನಲ್ಲಿಟ್ಟಿದ್ದ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿರುವುದಾಗಿ ಶಂಕಿಸಲಾಗಿದೆ.

[pj-news-ticker]