ಬೆಂಗಳೂರು : ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಕಿರಣ್ ಎಂಬಾತ ಪೊಲೀಸರು ವಶಕ್ಕೆ ಪಡೆದ ವ್ಯಕ್ತಿ. ಈ ಹಿಂದೆ ಪ್ರತಿಮಾ ಕಾರು ಚಾಲಕನಾಗಿದ್ದ ಕಿರಣ್ ಎನ್ನುವವರನ್ನ ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹಲವು ವರ್ಷಗಳಿಂದ ಕಾರು ಚಾಲಕನಾಗಿದ್ದ ಕಿರಣ್ನನ್ನು ಪ್ರತಿಮಾ ಅವರು ತೆಗೆದುಹಾಕಿದ್ದರು. ಕೆಲಸದಿಂದ ತೆಗದುಹಾಕಿದ್ದಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕಿರಣ್ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ ಎನ್ನಲಾಗಿದೆ.
ಕಿರಣ್ ಕಳೆದ ಐದು ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ಮಾಡುತ್ತಿದ್ದ. ಕಿರಣ್ ತಂದೆ ಸುರೇಶ್ ಸಹ ಇದೇ ಇಲಾಖೆಯಲ್ಲಿ ಚಾಲಕರಾಗಿದ್ದರು. ಆದರೆ ಪ್ರತಿಮಾ ಅವರು ಕಿರಣ್ ನನ್ನು ಕೆಲಸದಿಂದ ತೆಗೆದುಹಾಕಿದ್ದರು.