ಚಿಕ್ಕಮಗಳೂರು: ತಮ್ಮ ಊರಿನ ರಸ್ತೆಗೆ ತಾವೇ ಹಣ ಹಾಕಿ ರಸ್ತೆ ದುರಸ್ತಿ ಮಾಡಿರುವ ಘಟನೆ ನರಸಿಂಹರಾಜಪುರ ತಾಲೂಕು ಕರ್ಕೆಶ್ವರ ಗಬ್ಬೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರಸ್ತೆ ದುರಸ್ತಿ ಪಡಿಸುವಂತೆ ಸಂಬಂಧಪಟ್ಟವರಿಗೆ ಅನೇಕ ಬಾರೀ ಮನವಿ ಸಲ್ಲಿಸಿದರು. ಶಾಸಕರು ಮತ್ತು ಅಧಿಕಾರಿಗಳು ಸ್ಪಂದಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ತಮ್ಮ ಸ್ವಂತ ಹಣನ್ನು ವಿನಿಯೋಗಿಸಿ ರಸ್ತೆ ದುರಸ್ತಿ ಮಾಡಿಸಿದ್ದಾರೆ.
ಗ್ರಾಮಸ್ಥರು ಹಣ ಹಾಕಿ ಮಣ್ಣು ತರಸಿಕೊಂಡು ರಸ್ತೆ ದುರಸ್ತಿಗೆ ಮಾಡಿಸಿದ್ದು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಮಲೆನಾಡಿನ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟ್ರಿಪಲ್ ಇಂಜಿನ್ ಸರ್ಕಾರದ ಅವಧಿಯಲ್ಲಿ ರಸ್ತೆ ನಿರ್ಮಾಣ ಮಾಡಲು ಸಾಧ್ಯವಾಗಿಲ್ಲ. ರಾಜ್ಯ, ತಾಲೂಕು, ಪಂಚಾಯತ್ ಕಾಂಗ್ರೆಸ್ ಸರ್ಕಾರವಿದ್ದರೂ ರಸ್ತೆ ನಿರ್ಮಾಣವಾಗಿಲ್ಲ. ಕಳೆದ ಬಾರಿ ಜೀವರಾಜ್ ಕೆಲಸ ಮಾಡಲು ಬಿಡುತ್ತಿಲ್ಲವೆಂದು ಟಿ.ಡಿ.ರಾಜೇಗೌಡ ಹೇಳುತ್ತಿದ್ದರು. ಈಗ ನಿಮಗೆ ಯಾರು ಕೆಲಸ ಮಾಡಲು ಬಿಡುತ್ತಿಲ್ಲ ಎಂದು ಗ್ರಾಮಸ್ಥರು ಪ್ರಶ್ನಿಸಿದ್ದಾರೆ.