Spread the love

ಚಿಕ್ಕಬಳ್ಳಾಪುರ: ನನ್ನ ಮೇಲೆ ಒಂದು ಆರೋಪ ಸಾಬೀತು ಮಾಡಿದರೆ ಸರ್ಕಾರಿ ಸೇವೆಗೆ ರಾಜೀನಾಮೆ ಕೊಟ್ಟು ಮನೆಗೆ ಹೋಗುವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಅಧ್ಯಕ್ಷ ಷಡಕ್ಷರಿ ತಿಳಿಸಿದರು.

ಚಿಕ್ಕಬಳ್ಳಾಪುರ ನಗರದಲ್ಲಿ ಶುಕ್ರವಾರ ಸರ್ಕಾರಿ ನೌಕರ ಸಂಘ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ನಾನು ಯಾವುದೇ ತಪ್ಪು ಮಾಡಿಲ್ಲ. ಸರ್ಕಾರ ಯಾವುದೇ ತನಿಖೆ ಮಾಡಲಿ. ನಾನು ತಪ್ಪು ಮಾಡಿದ್ದರೆ ಪರಪ್ಪನ ಆಗ್ರಹಾರ ಜೈಲಿಗೆ ಹಾಕಲಿ ಎಂದು ನಾನು ಮುಖ್ಯಮಂತ್ರಿಗಳಿಗೆ ಹೇಳಿದ್ದೇನೆ. ನಾನು ಯಾವುದಕ್ಕೂ ಹೆದರು ವ್ಯಕ್ತಿ ನಾನಲ್ಲ ಎಂದರು.

ನಾನು ಎಲ್ಲವನ್ನೂ ನೋಡಿ ಬಂದಿದ್ದೇನೆ. ಸರ್ಕಾರ ಕೂಡಲೇ 7ನೇ ವೇತನ ಆಯೋಗದ ವರದಿ ಪಡೆದು ಅನುಷ್ಟಾನಕ್ಕೆ ತರಬೇಕು. ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತರಬೇಕು. ಈ ವಿಚಾರದಲ್ಲಿ ಸರ್ಕಾರದ ಮೇಲೆ ಸಂಘ ನಿರಂತರವಾಗಿ ಹೋರಾಟ ಮಾಡಲಿದೆ. ಅನಿವಾರ್ಯ ಆದರೆ ಹೋರಾಟ ಮಾಡುತ್ತೇವೆ. ಈ ವಿಚಾರದಲ್ಲಿ ಸರ್ಕಾರದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆ ಇಲ್ಲ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ.ಹರೀಶ್, ರಾಜ್ಯ ಪದಾಧಿಕಾರಿಗಳು ಇದ್ದರು. ಎಸ್ಎಸ್ಎಲ್ ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸರ್ಕಾರಿ ನೌಕರರ ಸಂಘದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ‌ವಿತರಿಸಲಾಯಿತು.

 

Leave a Reply

Your email address will not be published. Required fields are marked *