ಬೆಂಗಳೂರು: ಕನ್ನಡ ಹೋರಾಟಗಾರರ ಮೇಲಿನ ಕೇಸ್ ಹಿಂಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ.
ಇಂದು ವಿಧಾನಸೌಧದಲ್ಲಿ ಆವರಣದಲ್ಲಿ ಭುವನೇಶ್ವರಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ. ಅರ್ಜಿ ಕೊಟ್ಟರೆ ನ್ನಡ ಹೋರಾಟಗಾರರ ಮೇಲಿನ ಕೇಸ್ ಹಿಂಪಡೆಯುತ್ತೇವೆ. ಯಾಕಂದ್ರೆ ಅದು ಸಚಿವ ಸಂಪುಟಕ್ಕೆ ಹೋಗಬೇಕು. ಹಾಗಾಗಿ ಅರ್ಜಿ ಸಲ್ಲಿಸಬೇಕು ಎಂದು ಸ್ಪಷ್ಟಪಡಿಸಿದರು.
ಒಂದು ಭಾಷೆ ಮಾತನಾಡುವ ಜನ ಒಂದು ಆಡಳಿತದ ಸೂರಿನಡಿ ಬರಬೇಕು ಎನ್ನುವುದು ಕನ್ನಡ ಏಕೀಕರಣ ಚಳವಳಿಯ ಆಶಯವಾಗಿತ್ತು. ಈ ಆಶಯ ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಕನ್ನಡ ಓದುವುದನ್ನು, ಬರೆಯುವುದನ್ನು ಹೆಚ್ಚು ಹೆಚ್ಚು ಕಲಿಯಬೇಕು ಎಂದರು ಕರೆ ನೀಡಿದರು.
ಈ ನಾಡದೇವಿ ಭುವನೇಶ್ವರಿಯ ಕಂಚಿನ ಪ್ರತಿಮೆಯನ್ನು ಶಿಲ್ಪಿ ಶ್ರೀಧರ್ ಮೂರ್ತಿ ಅವರು ನಿರ್ಮಾಣ ಮಾಡಿದ್ದು, ಈ ಮೂರ್ತಿ ನಿರ್ಮಾಣಕ್ಕೆ ಬರೋಬ್ಬರಿ 12 ತಿಂಗಳು ಸಮಯ ತೆಗೆದುಕೊಂಡಿದ್ದಾರೆ. ನೂರಾರು ಶಿಲ್ಪಿಗಳು, ತಂತ್ರಜ್ಞರು, ಕಲಾವಿದರು ಮೂರ್ತಿ ನಿರ್ಮಾಣಕ್ಕೆ ಸಹಾಯ ಮಾಡಿದ್ದಾರೆ.
