ಶಿವಮೊಗ್ಗ: ಯಾರೋ ಒಬ್ಬ ವ್ಯಕ್ತಿಯಿಂದ ಪಕ್ಷ ಬೆಳೆಯಲ್ಲ. ಭಾರತೀಯ ಜನತಾ ಪಾರ್ಟಿ ಯಾರ ಮೇಲೂ ನಿಂತಿಲ್ಲ. ನರೇಂದ್ರ ಮೋದಿ ಕೂಡಾ ಓರ್ವ ಬಿಜೆಪಿಯಲ್ಲಿ ಕಾರ್ಯಕರ್ತರು. ನಾನು ಕೂಡ ಕಾರ್ಯಕರ್ತ. ಎಲ್ಲಾರೂ ಒಟ್ಟಾಗಿ 28 ಸ್ಥಾನ ಗೆಲ್ಲುತ್ತೇವೆ. ಸಾಮೂಹಿಕ ನೇತೃತ್ವದಲ್ಲಿ ಈ ಚುನಾವಣೆ ನಡೆಯಲಿದೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರಗೆ ಶುಭ ಹಾರೈಸಿದರು.
ದೇಶದಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಿದೆ ಎನ್ನುವುದು ಗೊತ್ತಿಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೂ ಕಾಂಗ್ರೆಸ್ ಪಕ್ಷ ಎಷ್ಟಿದೆ? ಕರ್ನಾಟಕದಲ್ಲಿ ಕಾಂಗ್ರೆಸ್ ಒಡೆದು ಚೂರಾಗಿದೆ ಎಂದರು.
ಕುಟುಂಬ ರಾಜಕಾರಣದ ಬಗ್ಗೆ ಟ್ವೀಟ್ ಮಾಡಲು ಕಾಂಗ್ರೆಸ್ ಗೆ ಅಧಿಕಾರ ಇದೆಯೇ? ನೆಹರೂ, ಇಂದಿರಾಗಾಂಧಿ, ಎಎಸಿಸಿ ಅಧ್ಯಕ್ಷರು ಕುಟುಂಬದವರು. ಎಲ್ಲೂ ವಿರೋಧವಿಲ್ಲ, ಬಿಜೆಪಿಯಲ್ಲಿ ಎಲ್ಲಾ ಒಟ್ಟಾಗಿದ್ದೇವೆ. ವಿಜಯೇಂದ್ರ ಅವರಿಂದ ಸಂಘಟನೆ ಬೆಳೆಯುತ್ತದೆ ಎಂದರು.