Trending

ಅಕ್ರಮವಾಗಿ ಪರಿಹಾರ ಪಡೆದ ಆರೋಪ : ಶಾಸಕ ಜಿಟಿ ದೇವೇಗೌಡ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ

Spread the love

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ದೂರುದಾರ ಸ್ನೇಹಮಯಿ ಕೃಷ್ಣ ಇದೀಗ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ವಿರುದ್ಧ 50:50 ಅನುಪಾತದಲ್ಲಿ ಸೈಟ್ ಮಾರಾಟ ಮಾಡಿ ಅಕ್ರಮವಾಗಿ ಪರಿಹಾರ ಪಡೆದ ಆರೋಪದ ಹಿನ್ನೆಲೆಯಲ್ಲಿ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ದೂರು ನೀಡಿದ್ದಾರೆ.

ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ನೀಡಿದ್ದು, ಜಿಟಿ ದೇವೇಗೌಡ ಮಹೇಂದ್ರ ಹೆಸರಿನಲ್ಲಿ ಬೇನಾಮಿಯಾಗಿ ಪರಿಹಾರ ಪಡೆಡಿದ್ದಾರೆ ಎಂದು ಆರೋಪಿಸಿದ್ದಾರೆ. ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಸಹೋದರಿ ಪುತ್ರ ಮಹೇಂದ್ರ, ದೇವನೂರು ಸರ್ವೇ ನಂಬರ್ 81/2 ರಲ್ಲಿ 2.22 ಎಕರೆ ಜಮೀನನ್ನು ಖರೀದಿಸಿದ್ದಾರೆ.

ಬಳಿಕ ಆ ಜಮೀನಿಗೆ 50:50 ಅನುಪಾತದಲ್ಲಿ ಅಕ್ರಮವಾಗಿ ಪರಿಹಾರ ಪಡೆದ ಆರೋಪ ಕೇಳಿ ಬರುತ್ತಿದೆ. 19 ಸೈಟ್ ಪಡೆದಿರುವ ಬಗ್ಗೆ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಲು ಮನವಿ ಮಾಡಿದ್ದಾರೆ. ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶಗೆ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ.

[pj-news-ticker]