ಶಿವಮೊಗ್ಗ: ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ನಗರದ ಹೊರ ವಲಯದಲ್ಲಿರುವ ಗೊಂದಿ ಚಟ್ನಳ್ಳಿ ಬಳಿ ನಡೆದಿದೆ.
ಬೈಕ್ ನಲ್ಲಿ ಗಂಡ ಹೆಂಡತಿ ಮತ್ತು ಮಗು ಪ್ರಯಾಣಿಸುತ್ತಿದ್ದು, ಮೂವರ ಪೈಕಿ ಇಬ್ಬರಿಗೆ ಗಂಭೀರ ಗಾಯವಾಗಿದೆ.
ಹೊಳೆಹೊನ್ನೂರು ಮೂಲದ ಷಪಿ ಸಾಬ್, ಪತ್ನಿ ಪ್ಯಾರಿ ಬಿ, ಮಗು ಗೌಸಿಯಾ ತೆರಳುತ್ತಿದ್ದರು. ಈ ವೇಳೆ ಬೈಕ್ ಮೇಲೆ ಮರ ಬಿದ್ದಿದೆ. ಮೂವರಿಗೆ ಶಿವಮೊಗ್ಗ ನಗರದ ವಿವಿಧ ಆಸ್ಪತ್ರೆ ಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಭಯಾನಕ ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ದೊಡ್ಡ ಅಪಘಾತವೊಂದು ಸ್ವಲ್ಪದರಲ್ಲೇ ತಪ್ಪಿದೆ.