Spread the love

ಬೆಂಗಳೂರು: 5 ಮತ್ತು 8ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದು ಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ಆದೇಶ ಹೊರಡಿಸಲಾಗಿದೆ. ನಿಯಮಗಳಿಗನುಸಾರ ಮುಂದಿನ ಶೈಕ್ಷಣಿಕ ವರ್ಷದಿಂದ ಬೋರ್ಡ್ ಪರೀಕ್ಷೆ ನಡೆಸಬಹುದು ಎಂದು ಶಿಕ್ಷಣ ಇಲಾಖೆಗೆ ನ್ಯಾ.ಪ್ರದೀಪ್ ಸಿಂಗ್ ಯೆರೂರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಾ.13ರಿಂದ 5, 8ನೇ ತರಗತಿ ಪರೀಕ್ಷೆಗಳು ಆರಂಭವಾಗಬೇಕಿತ್ತು. ಆದರೆ ಪಬ್ಲಿಕ್ ಪರೀಕ್ಷೆ ನಡೆಸದಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

ಈ ಶೈಕ್ಷಣಿಕ ವರ್ಷದಿಂದ 5, 8ನೇ ತರಗತಿ ಪಬ್ಲಿಕ್ ಪರೀಕ್ಷೆ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿತ್ತು. 5 ಮತ್ತು 8ನೇ ತರಗತಿಯ ವಾರ್ಷಿಕ ಪರೀಕ್ಷೆ ವಿರೋಧಿಸಿ ಪೋಷಕರ ಸಂಘಟನೆ ಕೋರ್ಟ್ ಮೊರೆ ಹೋಗಿದ್ದು, ಬೋರ್ಡ್ ಎಕ್ಸಂಗೆ ತಡೆ ನೀಡುವ ಮೂಲಕ ಹೈಕೋರ್ಟ್‌ ಶಿಕ್ಷಣ ಇಲಾಖೆಗೆ ಬಿಗ್ ಶಾಕ್ ನೀಡಿದೆ.

Leave a Reply

Your email address will not be published. Required fields are marked *