ಬೆಂಗಳೂರು: ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ಬಿಗ್ ಬಾಸ್ ಮಾಜಿ ಸ್ಪರ್ಧಿ ಕಿರಿಕ್ ಕೀರ್ತಿ ಅವರ ವೈಯಕ್ತಿಕ ಜೀವನ ಕುರಿತ ಅಪ ಪ್ರಚಾರದ ಸುದ್ದಿಗಳು ಹರಿದಾಡುತ್ತಿದ್ದವು. ಇಂತಹ ಸುದ್ದಿಗಳಿಗೆ ಪ್ರತಿಕ್ರಿಯಿಸಿರುವ ಕಿರಿಕ್ ಕೀರ್ತಿ, ನೆಟ್ಟಿಗರ ವಿರುದ್ಧ ಹರಿಹಾಯ್ದಿದ್ದಾರೆ.
ಈ ಕುರಿತು ಫೇಸ್ ಬುಕ್ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿರುವ ಕಿರಿಕ್ ಕೀರ್ತಿ, ಪ್ಲೀಸ್ ನಮ್ಮನ್ನು ಬದುಕೋಕೆ ಬಿಡ್ರಪ್ಪ… ಯಾಕ್ ಇಷ್ಟು ಟಾರ್ಚರ್ ಕೊಡ್ತೀರಿ ಎಂದು ಗರಂ ಆಗಿದ್ದಾರೆ.
ಎಲ್ಲರಿಗೂ ವೈಯಕ್ತಿಕ ಜೀವನ ಇರುತ್ತೆ. ಅದನ್ನು ಗೌರವಿಸಿ, ಸಾಮಾಜಿಕ ಮಾಧ್ಯಮದಲ್ಲಿ ಗಾಳಿ ಸುದ್ದಿ ಹಬ್ಬಿಸುವುದು, ಅಪ ಪ್ರಚಾರ ಮಾಡುವುದು, ಕೀಳಾಗಿ ನಿಂದಿಸುವುದು ಮಾಡಬೇಡಿ. ನಿಮಗೂ ವೈಯಕ್ತಿಕ ಜೀವನ ಇರುತ್ತೆ. ಮೊದಲು ಅದನ್ನು ಸರಿಪಡಿಸಿಕೊಳ್ಳಿ ಎಂದಿದ್ದಾರೆ.