Breaking
Tue. Oct 8th, 2024

ಕೆಯುಡಬ್ಲ್ಯುಜೆ ಹೋರಾಟದ ಫಲ ನನಸಾದ ಪತ್ರಕರ್ತರ ಬಸ್ ಪಾಸ್

By Mooka Nayaka News Feb 16, 2024
Spread the love

ಶಿವಮೊಗ್ಗ :ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ.ದಾವಣಗೆರೆಯಲ್ಲಿ ಇದೇ ಫೆ.3&4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಕೆಯುಡಬ್ಲ್ಯೂಜೆ ಶಿವಮೊಗ್ಗ ಜಿಲ್ಲಾ ಶಾಖೆ ಧನ್ಯವಾದಗಳನ್ನು ಸಲ್ಲಿಸುತ್ತದೆ.

ಮಂಡ್ಯ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿಯೂ ಉಚಿತ ಬಸ್ ಪಾಸ್ ಬಗ್ಗೆ ಕೆಯುಡಬ್ಲ್ಯುಜೆ ಮಂಡಿಸಿದ್ದ ಹಕ್ಕೊತ್ತಾಯ ಬಗ್ಗೆ ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದು,ಬಸ್ ಪಾಸ್ ಬೇಡಿಕೆ ಈಡೇರಿಸಲು ಸ್ಪಂದಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಎಲ್ಲಾ ಹಂತದಲ್ಲಿಯೂ ಸಹಕಾರ ನೀಡಿದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಮತ್ತು ಬೇಡಿಕೆ ಈಡೇರಿಕೆಗೆ ಅವಿರತವಾಗಿ ಶ್ರಮಿಸಿದ ಕೆಯುಡಬ್ಲ್ಯುಜೆ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರು ಅವರುಗಳಿಗೆ ಕರ್ನಾಟಕ ಕಾರ್ಯನಿರತ ತ್ರಕರ್ತ ರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆಯ ಅಧ್ಯಕ್ಷರಾದ ಕೆ ವಿ ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ವಿ ಟಿ ಅರುಣ್, ರಾಜ್ಯ ಸಮಿತಿ ನಿರ್ದೇಶಕರಾದ ಎನ್ ರವಿಕುಮಾರ್ ಟೆಲೆಕ್ಸ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

Related Post